ಚುನಾವಣಾ ಆಯೋಗವನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ (ಚಿತ್ರಕೃಪೆ: ಎಎನ್ಐ)
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಧಾರ ರಹಿತ ಆರೋಪ ಮಾಡುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ದ ಬಿಜೆಪಿ ನಿಯೋಗ ಶುಕ್ರವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ರಾಫೆಲ್ ವಿವಾದಕ್ಕೆ ಸಂಬಂಧಿಸಿದಂತೆ ಕಳೆದ ಹಲವು ವಾರಗಳಿಂದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಂದ್ರವಾಗಿಟ್ಟುಕೊಂಡು ಟೀಕಿಸುತ್ತಿದ್ದಾರೆ. ಚೌಕಿದಾರ್ ಚೋರ್ ಹೈ ಎಂದು ಟೀಕಿಸುತ್ತಿರುವ ರಾಹುಲ್ ಅನಿಲ್ ಅಂಬಾನಿಗೆ 30 ಸಾವಿರ ಕೋಟಿ ರೂ ಮೌಲ್ಯದ ಆರ್ಥಿಕ ನೆರವು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಕುರಿತಂತೆ ಇದೀಗ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ವಿರುದ್ಧ ತಿರುಗಿ ಬಿದ್ದಿರುವ ಬಿಜೆಪಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ ಮಾಡಿದೆ. ಹಿರಿಯ ಬಿಜೆಪಿ ನಾಯಕಿ ಹಾಗೂ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದ ನಿಯೋಗ ದೆಹಲಿಯಲ್ಲಿಂದು ಚುನಾವಣಾ ಆಯೋಗವನ್ನು ಭೇಟಿ ಮಾಡಿ ಈ ಸಂಬಂಧ ದೂರು ಸಲ್ಲಿಸಿತು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಫೇಲ್ ಕುರಿತ ಸುಪ್ರೀಂ ಕೋರ್ಟ್ ಆದೇಶವನ್ನು ತಪ್ಪಾಗಿ ವ್ಯಾಖ್ಯಾನಿಸಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ದ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಕೋರ್ಟ್ ಆದೇಶದ ಒಂದು ಪ್ಯಾರಾವನ್ನೂ ಓದದೇ ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿದರು.
ಇದೇ ವೇಳೆ ಪಶ್ಚಿಮ ಬಂಗಾಳ ಲೋಕಸಭಾ ಚುನಾವಣೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯನ್ನು ನಿಯೋಜಿಸದ 297 ಮತಗಟ್ಟೆಗಳಲ್ಲಿ ಮರುಮತದಾನ ನಡೆಸಬೇಕು ಎಂದು ಅವರು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics