ಹೇಮಾ ಮಾಲಿನಿ 
ದೇಶ

ನನ್ನ ಗೆಲುವಿಗೆ ಪ್ರಧಾನಿ ಮೋದಿ ಸಹಾಯ ಮಾಡುತ್ತಾರೆ: ಹೇಮಾ ಮಾಲಿನಿ

ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಮತ್ತೆ ಗೆಲುವು ಸಾಧಿಸಲು ನನ್ನ ಉತ್ತಮ ಕೆಲಸಗಳು ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ...

ಮಥುರಾ: ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಮತ್ತೆ ಗೆಲುವು ಸಾಧಿಸಲು ನನ್ನ ಉತ್ತಮ ಕೆಲಸಗಳು ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಸಹಾಯಕವಾಗಲಿದೆ ಎಂದು ನಟಿ, ಸಂಸದೆ ಹೇಮಾ ಮಾಲಿನಿ ಅವರು ಶನಿವಾರ ಹೇಳಿದ್ದಾರೆ.
ನಾನು ನನ್ನ ಕ್ಷೇತ್ರದಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದೇನೆ. ಹೀಗಾಗಿ ಮತ್ತೆ ನಾನು ಗೆಲ್ಲುವ ವಿಶ್ವಾಸವಿದೆ. ನನ್ನ ಸರ್ಕಾರ ಸಹ ಉತ್ತಮ ಕೆಲಸಗಳನ್ನು ಮಾಡಿದೆ. ಖಂಡಿತ ಜನ ನನ್ನ ಕೈಹಿಡಿಯುತ್ತಾರೆ ಎಂದು ಎಎನ್ಐಗೆ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಹೇಮಾ ಮಾಲಿನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈಗ ವ್ಯವಸ್ಥೆಯೇ ಸಂಪೂರ್ಣ ಬದಲಾಗುತ್ತಿದೆ. ಜನ ಅಭಿವೃದ್ಧಿ ಬಯಸುತ್ತಿದ್ದಾರೆ. ದೇಶಕ್ಕಾಗಿ ಶೀಘ್ರ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಗತ್ಯ ಇದೆ. ಹೀಗಾಗಿ ಎಲ್ಲಾ ವರ್ಗದ ಜನ ಮೋದಿಯವನ್ನು ಬೆಂಬಲಿಸುತ್ತಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ