ನವದೆಹಲಿ: ಪ್ರಚೋದನಾಕಾರಿ ಹೇಳಿಕೆ ನೀಡಿದ್ದಕ್ಕಾಗಿ ಚುನಾವಣಾ ಪ್ರಚಾರದಿಂದ 48 ಗಂಟೆಗಳ ನಿರ್ಬಂಧ ಎದುರಿಸುತ್ತಿರುವ ಬಿಎಸ್ ಪಿ ನಾಯಕಿ ಮಾಯಾವತಿಗೆ ಸುಪ್ರೀಂ ಕೋರ್ಟ್ ನಲ್ಲಿ ತೀವ್ರ ಹಿನ್ನಡೆಯುಂಟಾಗಿದೆ.
ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿ ಮಾಯಾವತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಮಾಯಾವತಿ ಅರ್ಜಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್, ಚುನಾವಣಾ ಆಯೋಗ ಇನ್ನೆಂದೂ ಹಲ್ಲುಕಿತ್ತ ಹಾವಿನಂತಿರುವುದಿಲ್ಲ ಎಂದು ಹೇಳಿದೆ.
ಈ ಲೋಕಸಭಾ ಚುನಾವಣೆಯಲ್ಲಿ ಒಂದು ನಿಗದಿತ ಪಕ್ಷಕ್ಕೆ ಮುಸ್ಲಿಮರು ಮತ ಚಲಾಯಿಸಬಾರದು ಎಂದು ದಿಯೋಬಂದ್ ಗೆ ಮನವಿ ಮಾಡಿಕೊಳ್ಳುವುದಾಗಿ ಹೇಳಿದ್ದರು. ಇದಕ್ಕೆ ವಿವರಣೆ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿತ್ತು. ಅಷ್ಟೇ ಅಲ್ಲದೇ 48 ಗಂಟೆಗಳ ಕಾಲ ಪ್ರಚಾರದಲ್ಲಿ ಪಾಲ್ಗೊಳ್ಳುವುದರಿಂದ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿತ್ತು.