ದೇಶ

ಲೋಕಸಭೆ ಚುನಾವಣೆ: ಲಖನೌನಿಂದ ನಾಮಪತ್ರ ಸಲ್ಲಿಸಿದ ರಾಜನಾಥ್ ಸಿಂಗ್

Lingaraj Badiger
ಲಖನೌ: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಉತ್ತರ ಪ್ರದೇಶದ ಲಖನೌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಪ್ರತಿಪಕ್ಷದಿಂದ ಈವರೆಗೂ ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಸಿಲ್ಲ.
ನಾಮಪತ್ರ ಸಲ್ಲಿಕೆಗೂ ಮುನ್ನ ರಾಜನಾಥ್ ಸಿಂಗ್ ಅವರು ಹನುಮಾನ್ ಸೇತು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸುಮಾರು 6 ಕಿ.ಮೀ. ಭರ್ಜರಿ ರೋಡ್ ಶೋ ನಡೆಸಿ, ನಂತರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
67 ವರ್ಷದ ರಾಜನಾಥ್ ಸಿಂಗ್ ಅವರು ಲಖನೌನಿಂದ ಎರಡನೇ ಬಾರಿಗೆ ಕಣಕ್ಕಿಳಿಯುತ್ತಿದ್ದಾರೆ. ರಾಜನಾಥ್ ಸಿಂಗ್ ಅವರು 2009ರಲ್ಲಿ ಉತ್ತರ ಪ್ರದೇಶದ ಘಾಜಿಯಾಬಾದ್ ಪಶ್ಚಿಮ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯ ಸಾಧಿಸಿದ್ದರು. ನಂತರ 2014ರಲ್ಲಿ ಕ್ಷೇತ್ರ ಬದಲಾಯಿಸಿ ಲಖನೌ ಲೋಕಸಭಾ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದರು.
ಲಖನೌ ಲೋಕಸಭಾ ಕ್ಷೇತ್ರಕ್ಕೆ ಮೇ 6ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಎರಡು ದಿನ ಮಾತ್ರ ಬಾಕಿ ಉಳಿದಿದೆ.
SCROLL FOR NEXT