ದೇಶ

ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲು ಪ್ರಿಯಾಂಕಾ ಸಿದ್ಧ: ರಾಬರ್ಟ್ ವಾದ್ರಾ

Lingaraj Badiger
ನವದೆಹಲಿ: ತಮ್ಮ ಪತ್ನಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧಿಸಲು ಸಿದ್ಧರಾಗಿದ್ದಾರೆ ಎಂದು ಪತಿ ರಾಬರ್ಟ್ ವಾದ್ರಾ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಮಾಧ್ಯಮದೊಂದಿಗೆ ಮಾತನಾಡಿದ ರಾಬರ್ಟ್ ವಾದ್ರಾ, ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪ್ರಿಯಾಂಕಾ ಒಪ್ಪಿಕೊಂಡಿದ್ದಾರೆ. ಆದರೆ ಈ ಬಗ್ಗೆ ಪಕ್ಷ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.
ಪ್ರಿಯಾಂಗಾ ಗಾಂಧಿ ಅವರು ಕಳೆದ ತಿಂಗಳು ಪ್ರಯಾಗ್ ರಾಜ್ ನಿಂದ ವಾರಣಾಸಿಗೆ ಗಂಗಾ ನದಿಯಲ್ಲಿ ಬೋಟ್ ನಲ್ಲಿ ತೆರಳಿದ್ದರು. ಈ ಮೂಲಕ ಪ್ರಧಾನಿ ಮೋದಿ ವಿರುದ್ಧ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿತ್ತು.
ಪ್ರಿಯಾಂಕಾ ಗಾಂಧಿ ಸಹ ವಾರಣಾಸಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದು, ಇದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಒಪ್ಪಿಗೆ ನೀಡಬೇಕಿದೆ. 
2014ರಲ್ಲಿ ಪ್ರಧಾನಿ ಅಭ್ಯರ್ಥಿಯಾಗಿದ್ದ ನರೇಂದ್ರ ಮೋದಿ ಅವರು ವಾರಣಾಸಿ ಲೋಕಸಭೆಯಿಂದ ಮೊದಲ ಬಾರಿಗೆ ಸ್ಪರ್ಧಿಸಿದ್ದರು. ಮೋದಿಗೆ ಎದುರಾಗಿ ಎಎಪಿ ಪಕ್ಷದ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ಸ್ಪರ್ಧಿಸಿದ್ದು 3 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಮೋದಿ ವಿರುದ್ಧ ಸೋತಿದ್ದರು.
SCROLL FOR NEXT