ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಹಿಂದುಳಿದ ವರ್ಗಕ್ಕೆ ಕಾಂಗ್ರೆಸ್ ನಿಂದ ಅವಮಾನ: 'ಎಲ್ಲಾ ಮೋದಿಗಳು ಕಳ್ಳರು' ಹೇಳಿಕೆಗೆ ಪ್ರಧಾನಿ ತಿರುಗೇಟು

ಕಾಂಗ್ರೆಸ್ ಅಧ್ಯಕ್ಷರು ತಮ್ಮನ್ನು ಕಳ್ಳ ಎಂದು ಕರೆಯುವ ಮೂಲಕ ಇಡೀ ಹಿಂದೂಳಿದ ವರ್ಗಗಳಿಗೆ ಅವಮಾನ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ...

ನರೇಂದ್ರ ಮೋದಿ
Lingaraj Badiger
Updated On : 17 Apr 2019, 5:00 am
ಅಕ್ಲುಜ್: ಕಾಂಗ್ರೆಸ್ ಅಧ್ಯಕ್ಷರು ತಮ್ಮನ್ನು ಕಳ್ಳ ಎಂದು ಕರೆಯುವ ಮೂಲಕ ಇಡೀ ಹಿಂದೂಳಿದ ವರ್ಗಗಳಿಗೆ ಅವಮಾನ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ‘ಎಲ್ಲ ಮೋದಿಗಳೂ ಕಳ್ಳರೇಕೆ?’ ಎಂಬ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಇಂದು ಮಹಾರಾಷ್ಟ್ರದಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಸಮಾಜದಲ್ಲಿರುವ ಎಲ್ಲಾ ಮೋದಿಗಳು ಕಳ್ಳರು ಎಂದು ಹೇಳುತ್ತಿದ್ದಾರೆ. ಈ ಮೂಲಕ ನನ್ನ ಹಿಂದೂಳಿದ ಜಾತಿಯನ್ನು ಅವಮಾನಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಅವಹೇಳನಕಾರಿಯಾಗಿ ಮಾತನಾಡುವುದು ‘ವಂಶಸ್ಥ’ನಿಗೆ ಫ್ಯಾಷನ್‌ ಆಗಿಬಿಟ್ಟಿದೆ’. ಈ ಹಿಂದೆ ಚೌಕಿದಾರ್ ಚೋರ್ ಹೈ ಎಂದು ಹೇಳುತ್ತಿದ್ದರು. ಈಗ ಹಿಂದೂಳಿದ(ಮೋದಿ) ಸಮುದಾಯವನ್ನು ಅವಮಾನ ಮಾಡುತ್ತಿದ್ದಾರೆ ಎಂದರು.

Advertisement

Advertisement

ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ಮೋಸ ಮಾಡುವಲ್ಲಿ ಕಾಂಗ್ರೆಸ್‌ ಪಿಎಚ್‌ಡಿ ಮಾಡಿದೆ ಎಂದು ಪ್ರಧಾನಿ ಮೋದಿ ಟೀಕಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement