ಸಂಗ್ರಹ ಚಿತ್ರ 
ದೇಶ

'ಕಳ್ಳರ ಹೆಸರಿನ ಮುಂದೆ ಮೋದಿ ಹೆಸರಿದೆ' ಎಂದಿದ್ದ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ

ಕಳ್ಳರ ಹೆಸರಿನ ಮುಂದೆ ಮೋದಿ ಹೆಸರಿದೆ ಎಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಇದೀಗ ಬಿಹಾರ ಉಪಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದಾರೆ.

ನವದೆಹಲಿ: ಕಳ್ಳರ ಹೆಸರಿನ ಮುಂದೆ ಮೋದಿ ಹೆಸರಿದೆ ಎಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಇದೀಗ ಬಿಹಾರ ಉಪಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದಾರೆ.
ಪಾಟ್ನಾ ನ್ಯಾಯಾಲಯದಲ್ಲಿ ಸುಶೀಲ್ ಮೋದಿ ಗುರುವಾರ ಪ್ರಕರಣ ದಾಖಲಿಸಿದ್ದು, 'ರಾಹುಲ್ ಗಾಂಧಿ ಏಪ್ರಿಲ್ 13ರಂದು ಕರ್ನಾಟಕದ ಕೋಲಾರದಲ್ಲಿ ನೀಡಿರುವ ಹೇಳಿಕೆಯಲ್ಲಿ, ಹಣಕಾಸು ಅವ್ಯವಹಾರದಲ್ಲಿ ಭಾಗಿಯಾಗಿ ವಿದೇಶಕ್ಕೆ ಹಾರಿರುವ ನೀರವ್ ಮೋದಿ, ಐಪಿಲ್ ಕ್ರಿಕೆಟ್ ನ ಆಡಳಿತಾಧಿಕಾರಿಯಾಗಿದ್ದ ಲಲಿತ್ ಮೋದಿ, ರಫೇಲ್ ಯುದ್ಧವಿಮಾನ ಹಗರಣದ ನರೇಂದ್ರ ಮೋದಿ ಸೇರಿದಂತೆ ಎಲ್ಲರೂ ಒಂದಿಲ್ಲೊಂದು ಹಗರಣದಲ್ಲಿ ಭಾಗಿಯಾಗಿದ್ದಾರೆ. ಈ ಎಲ್ಲಾ ಕಳ್ಳರ ಹೆಸರಿನ ಮುಂದೆ ಮೋದಿ ಎಂಬ ಸರ್ ನೇಮ್ ಇದೆ ಎಂದಿರುವುದು ಐಪಿಸಿ ಸೆಕ್ಷನ್ 500ರ ಅಡಿಯಲ್ಲಿ ಅಪರಾಧವಾಗುತ್ತದೆ. ರಾಹುಲ್ ಗಾಂಧಿ ನೀಡಿರುವ ಈ ಹೇಳಿಕೆ ಮಾನಹಾನಿಕರವಾಗಿದೆ. ಈ ಅಪರಾಧಕ್ಕೆ ಎರಡು ವರ್ಷ ಶಿಕ್ಷೆ, ದಂಡ ಅಥವಾ ಎರಡನ್ನೂ ವಿಧಿಸಬಹುದು ಎಂದು ಸುಶೀಲ್ ಕುಮಾರ್ ಮೋದಿ ತಿಳಿಸಿದ್ದಾರೆ.
ರಾಹುಲ್ ಗಾಂಧಿ ಅವರ ಈ ಹೇಳಿಕೆ ಮೋದಿ ಎಂಬ ಹೆಸರಿನವರ ಘನತೆಗೆ ಸಾರ್ವಜನಿಕರ ಹಿತದೃಷ್ಟಿಯಲ್ಲಿ ಕುಂದುಂಟು ಮಾಡುತ್ತದೆ. ಆದ್ದರಿಂದ ಅವರನ್ನು ಕರೆಸಿ ವಿಚಾರಣೆ ನಡೆಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಇದಲ್ಲದೆ, ರಾಹುಲ್ ಗಾಂಧಿ ಅವರು ಎಲ್ಲಾ ಸಮಾರಂಭಗಳಲ್ಲೂ ನೀಡುತ್ತಿರುವ 'ಚೌಕಿದಾರ್ ಚೋರ್ ಹೈ' ಹೇಳಿಕೆಯೂ ಕೂಡ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಅವಹೇಳನ ಮಾಡುವಂತಹ ಹೇಳಿಕೆಯಾಗಿದೆ. ರಾಹುಲ್ ಗಾಂಧಿಯವರ ಈ ನಡೆಯ ಕುರಿತು ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದು ಕಾದುನೋಡುತ್ತಿದ್ದೇನೆ ಎಂದು ಸುಶೀಲ್ ಮೋದಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT