ದೇಶ

ಕೇರಳದಲ್ಲಿ ಬಿಜೆಪಿಯ ಮಹತ್ವಾಕಾಂಕ್ಷೆ ಅಂತ್ಯ: ಮುಖ್ಯಮಂತ್ರಿ ಪಿಣರಾಯ್ ವಿಜಯನ್

Nagaraja AB

ಕೇರಳ: ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಕಣ್ಣೂರು ಜಿಲ್ಲೆಯ ಆರ್ ಸಿ ಅಮಾಲಾ ಬೇಸಿಕ್ ಯುಪಿ ಶಾಲೆಯಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಯಲ್ಲಿ ಮತದಾನ ಮಾಡಿದರು ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿದ ವಿಜಯನ್  ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.

ಬಳಿಕ ಮಾತನಾಡಿದ ಅವರು, ಕೇರಳ ರಾಜ್ಯದಲ್ಲಿ ಈ ಚುನಾವಣೆಯಲ್ಲಿ ಎಲ್ ಡಿಎಫ್ ಹಾಗೂ ಯುಡಿಎಫ್ ನಡುವಣ ಹೋರಾಟವಾಗಿದೆ. ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಕೊನೆಯ ಸ್ಥಾನಕ್ಕೆ ಹೋಗಲಿದೆ. ಈ ಚುನಾವಣೆ ಮೂಲಕ ಬಿಜೆಪಿಯ ಎಲ್ಲಾ ಮಹತ್ವಾಕಾಂಕ್ಷೆಗಳು ಅಂತ್ಯಗೊಳ್ಳಲಿವೆ ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವೈನಾಡು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವುದರಿಂದ ಕೇರಳದ ಚುನಾವಣೆ ರಾಷ್ಟ್ರದ ಗಮನ ಸೆಳೆದಿದೆ.
227 ಅಭ್ಯರ್ಥಿಗಳು ಕಣದಲ್ಲಿದ್ದು, 2.62 ಕೋಟಿಗೂ ಅಧಿಕ ಮಂದಿ ಮತದಾರರು ಮತ ಚಲಾಯಿಸಲಿದ್ದಾರೆ. ಕಳೆದ ಬಾರಿ ಶೇ. 74.02 ರಷ್ಟು ಮತದಾನವಾಗಿತ್ತು. ಈ ಬಾರಿ ಅದಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಮತದಾನದ ಬಗ್ಗೆ ನಿರೀಕ್ಷೆ ಹೊಂದಲಾಗಿದೆ.
SCROLL FOR NEXT