ಸಂಗ್ರಹ ಚಿತ್ರ 
ದೇಶ

ಚುನಾವಣೆ ಮುಗಿಯುವವರೆಗೂ ಪಿಎಂ ಮೋದಿ ಬಯೋಪಿಕ್​ ಸಿನಿಮಾ ಬಿಡುಗಡೆಗೆ ಅನುಮತಿ ಇಲ್ಲ!

ಹಾಲಿ ಲೋಕಸಭಾ ಚುನಾವಣೆ ಮುಕ್ತಾಯವಾಗುವವರೆಗೂ ಪ್ರಧಾನಿ ನರೇಂದ್ರ ಮೋದಿ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ನವದೆಹಲಿ: ಹಾಲಿ ಲೋಕಸಭಾ ಚುನಾವಣೆ ಮುಕ್ತಾಯವಾಗುವವರೆಗೂ ಪ್ರಧಾನಿ ನರೇಂದ್ರ ಮೋದಿ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಪ್ರಧಾನಿ ಮೋದಿಯವರ ಜೀವನಾಧಾರಿತ ಬಯೋಪಿಕ್​ ಸಿನಿಮಾ ‘ಪಿಎಂ ನರೇಂದ್ರ ಮೋದಿ’ ಬಿಡುಗಡೆಗೆ ಲೋಕಸಭಾ ಚುನಾವಣೆಯ ಮತದಾನದ ಎಲ್ಲ ಹಂತಗಳು ಮುಗಿಯುವವರೆಗೂ ಅನುಮತಿ ನೀಡುವುದಿಲ್ಲ ಎಂದು ಚುನಾವಣಾ ಆಯೋಗ ಸುಪ್ರೀಂಕೋರ್ಟ್​ಗೆ ತಿಳಿಸಿದೆ. 
'ಇದು ಮೋದಿಯವರ ಜೀವನ ಚರಿತ್ರೆ ಎನ್ನುವುದಕ್ಕಿಂತ ರಾಜಕೀಯ ಕಾರ್ಯಸೂಚಿಗಳನ್ನು ತೋರಿಸಿದ ಸಂತ ಚರಿತ್ರೆ ಎನ್ನಬಹುದು. ಈಗಲೇ ಬಿಡುಗಡೆ ಮಾಡಿದರೆ ಚುನಾವಣಾ ವ್ಯವಸ್ಥೆ ಆಡಳಿತ ರೂಢ ಬಿಜೆಪಿ ಪಕ್ಷದ ಕಡೆಗೆ ವಾಲಿದಂತೆ ಆಗುತ್ತದೆ. ಹಾಗಾಗಿ ಸದ್ಯ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ' ಎಂದು ತನ್ನ ನಿಲುವನ್ನು ಆಯೋಗ ಸ್ಪಷ್ಟಪಡಿಸಿದೆ.
ಮೋದಿಯವರ ಬಯೋಪಿಕ್​ ಸಿನಿಮಾ ನೋಡಿದ ಬಳಿಕ ಸಿನಿಮಾ ಬಿಡುಗಡೆ ಬಗ್ಗೆ ತೀರ್ಮಾನಿಸಿ ಏ.22ರೊಳಗೆ ವರದಿ ನೀಡುವಂತೆ ಸುಪ್ರೀಂಕೋರ್ಟ್​ ಚುನಾವಣಾ ಆಯೋಗಕ್ಕೆ ಈ ಹಿಂದೆ ಸೂಚನೆ ನೀಡಿತ್ತು. ಅದಾದ ಬಳಿಕ ಏ.17ರಂದು ಆಯೋಗದ ಏಳು ಅಧಿಕಾರಿಗಳನ್ನೊಳಗೊಂಡ ತಂಡ ಪಿಎಂ ನರೇಂದ್ರ ಮೋದಿಯವರ ಬಯೋಪಿಕ್​ ಸಿನಿಮಾವನ್ನು ವೀಕ್ಷಿಸಿತ್ತು. ಈಗ ಆಯೋಗ ತನ್ನ ವರದಿ ನೀಡಿದೆ. ಆಯೋಗದ ವರದಿಯಲ್ಲಿ 'ಈ ಬಯೋಪಿಕ್ ​ನಲ್ಲಿ ನರೇಂದ್ರ ಮೋದಿಯವರನ್ನು ತುಂಬ ಪ್ರಶಂಸಿಸಿ ಚಿತ್ರಿಸಲಾಗಿದೆ. ಅಲ್ಲದೆ ಬಹುತೇಕ ಪ್ರತಿಪಕ್ಷಗಳು ಭ್ರಷ್ಟವೆಂದು ಹಲವು ದೃಶ್ಯಗಳಲ್ಲಿ ಬಿಂಬಿಸಲಾಗಿದೆ. 
ಈಗ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಸಿನಿಮಾ ಬಿಡುಗಡೆಗೆ ಅವಕಾಶ ನೀಡಿದರೆ ಚುನಾವಣಾ ವ್ಯವಸ್ಥೆ ಒಂದು ಪಕ್ಷದ ಪರ ಒಲವು ತೋರಿದಂತೆ ಆಗುತ್ತದೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿ.ಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ; ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

15 ವರ್ಷದ ಹಳೆ ವಿಡಿಯೋ ಅದಂತೆ.., ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': 'ಜೈಲರ್ 2' ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!