ಸಂಗ್ರಹ ಚಿತ್ರ 
ದೇಶ

ಮುಕ್ತ ಮತ್ತು ನಿಸ್ಪಕ್ಷಪಾತ ಚುನಾವಣೆಗಾಗಿ ಪಿಎಂ ಮೋದಿ ಬಯೋಪಿಕ್ ಬಿಡುಗಡೆ ಇಲ್ಲ!

ಹಾಲಿ ಲೋಕಸಭಾ ಚುನಾವಣೆ ಮುಕ್ತ ಮತ್ತು ನಿಸ್ಪಕ್ಷಪಾತದಿಂದ ನಡೆಯಬೇಕು ಎಂಬ ಉದ್ದೇಶದಿಂದಲೇ ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಚಿತ್ರಕ್ಕೆ ತಡೆ ನೀಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮತ್ತೊಮ್ಮೆ ಸ್ಪಷ್ಟಪಡಿಸಿದೆ.

ನವದೆಹಲಿ: ಹಾಲಿ ಲೋಕಸಭಾ ಚುನಾವಣೆ ಮುಕ್ತ ಮತ್ತು ನಿಸ್ಪಕ್ಷಪಾತದಿಂದ ನಡೆಯಬೇಕು ಎಂಬ ಉದ್ದೇಶದಿಂದಲೇ ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಚಿತ್ರಕ್ಕೆ ತಡೆ ನೀಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮತ್ತೊಮ್ಮೆ ಸ್ಪಷ್ಟಪಡಿಸಿದೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಆಯೋಗ, ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ಚಿತ್ರ ಬಿಡುಗಡೆಗೆ ಅನುವು ಮಾಡಿಕೊಟ್ಟರೆ ಚುನಾವಣಾ ನೀತಿ ಸಂಹಿತಿಗೆ ಧಕ್ಕೆ ಮಾಡಿದಂತೆ. ಹೀಗಾಗಿ ಮುಕ್ತ ಮತ್ತು ನಿಸ್ಪಕ್ಷಪಾತ ಚುನಾವಣೆಯ ಉದ್ದೇಶದಿಂದ ಈ ಚಿತ್ರ ಬಿಡುಗಡೆಗೆ ತಡೆ ನೀಡಲಾಗಿದೆ ಎಂದು ಆಯೋಗ ಹೇಳಿದೆ.
ಚಿತ್ರವನ್ನು ತಡೆಯುವ ಹಿಂದೆ ಆಯೋಗಕ್ಕೆ ಯಾವುದೇ ಹಿತಾಸಕ್ತಿ ಇಲ್ಲ. ಆದರೆ ಚಿತ್ರದಲ್ಲಿ ಪ್ರಧಾನಿ ಮೋದಿ ಅವರನ್ನು ವೈಭವೀಕರಿಸಲಾಗಿದ್ದು, ಇದರಿಂದ ಮತದಾರರ ಮೇಲೆ ಪ್ರಭಾವ ಬೀರಿದಂತಾಗುತ್ತದೆ. ಇದೇ ಕಾರಣಕ್ಕೆ ಆಯೋಗ ಚಿತ್ರ ಬಿಡುಗಡೆಗೆ ನಿರ್ಬಂಧ ಹೇರಿದ್ದು, ಚುನಾವಣೆ ಮುಕ್ತಾಯದ ಬಳಿಕ ಚಿತ್ರ ಬಿಡುಗಡೆ ಮಾಡಬಹುದು ಎಂದು ಹೇಳಿದೆ.
ಇನ್ನು ಈ ಹಿಂದೆ  ಚಿತ್ರದ ಕುರಿತು ಮಾತನಾಡಿದ್ದ ಆಯೋಗ, 'ಇದು ಮೋದಿಯವರ ಜೀವನ ಚರಿತ್ರೆ ಎನ್ನುವುದಕ್ಕಿಂತ ರಾಜಕೀಯ ಕಾರ್ಯಸೂಚಿಗಳನ್ನು ತೋರಿಸಿದ ಸಂತ ಚರಿತ್ರೆ ಎನ್ನಬಹುದು. ಈಗಲೇ ಬಿಡುಗಡೆ ಮಾಡಿದರೆ ಚುನಾವಣಾ ವ್ಯವಸ್ಥೆ ಆಡಳಿತ ರೂಢ ಬಿಜೆಪಿ ಪಕ್ಷದ ಕಡೆಗೆ ವಾಲಿದಂತೆ ಆಗುತ್ತದೆ. ಹಾಗಾಗಿ ಸದ್ಯ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ' ಎಂದು ತನ್ನ ನಿಲುವನ್ನು ಆಯೋಗ ಸ್ಪಷ್ಟಪಡಿಸಿತ್ತು.
ಮೋದಿಯವರ ಬಯೋಪಿಕ್​ ಸಿನಿಮಾ ನೋಡಿದ ಬಳಿಕ ಸಿನಿಮಾ ಬಿಡುಗಡೆ ಬಗ್ಗೆ ತೀರ್ಮಾನಿಸಿ ಏ.22ರೊಳಗೆ ವರದಿ ನೀಡುವಂತೆ ಸುಪ್ರೀಂಕೋರ್ಟ್​ ಚುನಾವಣಾ ಆಯೋಗಕ್ಕೆ ಈ ಹಿಂದೆ ಸೂಚನೆ ನೀಡಿತ್ತು. ಅದಾದ ಬಳಿಕ ಏ.17ರಂದು ಆಯೋಗದ ಏಳು ಅಧಿಕಾರಿಗಳನ್ನೊಳಗೊಂಡ ತಂಡ ಪಿಎಂ ನರೇಂದ್ರ ಮೋದಿಯವರ ಬಯೋಪಿಕ್​ ಸಿನಿಮಾವನ್ನು ವೀಕ್ಷಿಸಿತ್ತು. ಈಗ ಆಯೋಗ ತನ್ನ ವರದಿ ನೀಡಿದೆ. ಆಯೋಗದ ವರದಿಯಲ್ಲಿ 'ಈ ಬಯೋಪಿಕ್ ​ನಲ್ಲಿ ನರೇಂದ್ರ ಮೋದಿಯವರನ್ನು ತುಂಬ ಪ್ರಶಂಸಿಸಿ ಚಿತ್ರಿಸಲಾಗಿದೆ. ಅಲ್ಲದೆ ಬಹುತೇಕ ಪ್ರತಿಪಕ್ಷಗಳು ಭ್ರಷ್ಟವೆಂದು ಹಲವು ದೃಶ್ಯಗಳಲ್ಲಿ ಬಿಂಬಿಸಲಾಗಿದೆ. ಈಗ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಸಿನಿಮಾ ಬಿಡುಗಡೆಗೆ ಅವಕಾಶ ನೀಡಿದರೆ ಚುನಾವಣಾ ವ್ಯವಸ್ಥೆ ಒಂದು ಪಕ್ಷದ ಪರ ಒಲವು ತೋರಿದಂತೆ ಆಗುತ್ತದೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ. ವಿಜಯೇಂದ್ರ

ಯುವ ಜನತೆಯ ಆಕ್ರೋಶ ತಡೆಯಲು ಸಾಧ್ಯವಿಲ್ಲ, ಇಡೀ ದೇಶ ಜಂತರ್ ಮಂತರ್ ಆಗಲಿದೆ: ಪ್ರಕಾಶ್ ರಾಜ್

ಸೆಪ್ಟೆಂಬರ್‌ನಲ್ಲಿ ನಿರೀಕ್ಷೆ ಮೀರಿ ಹೆಚ್ಚಿದ ಭಾರತದ ಸಗಟು ಹಣದುಬ್ಬರ: ಶೇ.11.4ಕ್ಕೆ ಏರಿಕೆ

'ಅಧರ್ಮ ಎಸಗಿದವರಿಗೆ ಶಿಕ್ಷೆ ನೀಡುವುದೂ ಧರ್ಮವೇ'; ಮೀರತ್ ಹತ್ಯೆ ಪ್ರಕರಣ ಶಿಕ್ಷೆ ಪ್ರಕಟ ವೇಳೆ ನ್ಯಾಯಾಧೀಶರಿಂದ ಭಗವದ್ಗೀತೆ ಉಲ್ಲೇಖ!

ಟೀಂ ಇಂಡಿಯಾ ಸೆಲೆಕ್ಷನ್ ಕಮಿಟಿ ಅಧ್ಯಕ್ಷರ ಆಯ್ಕೆ: ಮೇಜರ್ ಟ್ವಿಸ್ಟ್, ರೇಸ್ ನಿಂದ ಪಾರ್ಥಿವ್‌ ಪಟೇಲ್ ಔಟ್? 24 ಟೆಸ್ಟ್‌ ಅನುಭವದ ಮಾಜಿ ಕ್ರಿಕೆಟಿಗನ ಹೆಸರು ಮುಂಚೂಣಿಗೆ!