ಗೌತಮ್ ಗಂಭೀರ್ 
ದೇಶ

ಎರಡು ಕಡೆ ವೋಟರ್ ಐಡಿ: ಗೌತಮ್ ಗಂಭೀರ್ ವಿರುದ್ಧ ಆಪ್ ದೂರು

ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ ಅವರು ಎರಡು ಕಡೆ ವೋಟರ್ ಐಡಿ ಹೊಂದಿದ್ದಾರೆ...

ನವದೆಹಲಿ: ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ ಅವರು ಎರಡು ಕಡೆ ವೋಟರ್ ಐಡಿ ಹೊಂದಿದ್ದಾರೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷ(ಎಎಪಿ) ಶುಕ್ರವಾರ ದೂರು ದಾಖಲಿಸಿದೆ.
ಗೌತಮ್ ಗಂಭೀರ್ ಅವರು ದೆಹಲಿಯ ಕರೋಲ್ ಬಾಗ್ ಮತ್ತು ರಾಜಿಂದರ್ ನಗರ್ ಎರಡು ಕಡೆ ವೋಟರ್ ಐಡಿ ಹೊಂದಿದ್ದು, ಇದು ಕ್ರಿಮಿನಲ್ ಪ್ರಕರಣವಾಗಿದ್ದು, ಕೂಡಲೇ ಅವರನ್ನು ಅನರ್ಹಗೊಳಿಸಬೇಕು ಎಂದು ಪೂರ್ವ ದೆಹಲಿ ಎಎಪಿ ಅಭ್ಯರ್ಥಿ ಅತಿಶಿ ಅವರು ಟ್ವೀಟ್ ಮಾಡಿದ್ದಾರೆ.
ಈ ಸಂಬಂಧ ನಾವು ಗೌತಮ್ ಗಂಭೀರ್ ವಿರುದ್ಧ ತಿಸ್ ಹಜಾರಿ ಕೋರ್ಟ್ ನಲ್ಲಿ ಕೇಸ್ ದಾಖಲಿಸಿದ್ದು, ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ ಮಾಜಿ ಕ್ರಿಕೆಟಿಗನಿಗೆ ಒಂದು ವರ್ಷದ ವರೆಗೆ ಗಂಭೀರ್ ಗೆ ಜೈಲು ಶಿಕ್ಷೆ ನೀಡಬೇಕೆಂದು ಅತಿಶಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಗೌತಮ್ ಗಂಭೀರ್ ಅವರು ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!