ಅಸನ್ಸೋಲಾ: ನನಗೆ 'ಬೆಡ್ ಟೀ ಕೊಡುವುದು ತಡ ಮಾಡಿದರು. ಹೀಗಾಗಿ ನಾನು ತಡವಾಗಿ ಎದ್ದೆ... ಗಲಾಟೆ ಬಗ್ಗೆ ನನಗೆ ಏನೂ ಗೊತ್ತಿಲ್ಲ' ಎಂದು ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಮೂನ್ ಮೂನ್ ಸೇನ್ ಅವರು ಹೇಳಿದ್ದಾರೆ.
ಇಂದು ತಮ್ಮದೇ ಕ್ಷೇತ್ರದಲ್ಲಿ ಟಿಎಂಸಿ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಈ ಬಗ್ಗೆ ವರದಿಗಾರರು ಕೇಳಿದ ಪ್ರಶ್ನೆಗೆ ಟಿಎಂಸಿ ಅಭ್ಯರ್ಥಿ ಹಾಗೂ ನಟಿ ಮೂನ್ ಮೂನ್ ಸೇನ್ ಈ ರೀತಿ ಉತ್ತರ ನೀಡಿದ್ದಾರೆ.
ಪಶ್ಚಿಮ ಬಂಗಾಳದ ಅಸನ್ಸೋಲಾ ಮತಗಟ್ಟೆಯಲ್ಲಿ ಬಿಜೆಪಿ-ಟಿಎಂಸಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಪೊಲೀಸ್ ಲಾಠಿ ಚಾರ್ಜ್ ಕೂಡ ಆಗಿದೆ. ಅಲ್ಲದೆ ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಬಾಬುಲ್ ಸುಪ್ರಿಯೋ ಅವರ ಕಾರು ಕೂಡ ಧ್ವಂಸವಾಗಿದೆ.
ಟಿಎಂಸಿ ಕಾರ್ಯಕರ್ತರು ಬೂತ್ನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದಾರೆ. ಜನರಿಗೆ ಮತದಾನ ಮಾಡಲು ಬಿಡುತ್ತಿಲ್ಲ ಎಂದು ಆರೋಪಿಸಿದ ಬಾಬುಲ್ ಸುಪ್ರಿಯೋ ಹೇಳಿಕೆಗೆ ಏನು ಪ್ರತಿಕ್ರಿಯೆ ನೀಡುತ್ತಿರಿ ಎಂಬ ಪ್ರಶ್ನೆಗೆ ಉತ್ತರಿಸಿದ ಮೂನ್ ಮೂನ್ ಸೇನ್, ಅವರ ಹೆಸರನ್ನು ಹೇಳಬೇಡಿ. ಅವರ ಬಗ್ಗೆ ಕೇಳಿದರೆ ನಾನು ಮಾತನಾಡುವುದಿಲ್ಲ ಎಂದಿದ್ದಾರೆ.
ನಾನು ಈ ಚುನಾವಣೆಯಲ್ಲಿ ಗೆಲ್ಲುವ ಆತ್ಮವಿಶ್ವಾಸದಲ್ಲಿದ್ದೇನೆ. ಮುಂದೇನಾಗುತ್ತದೆ ನೋಡೋಣ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics