ಅಖಿಲೇಶ್ ಯಾದವ್, ಮುಲಾಯಂ ಸಿಂಗ್ ಯಾದವ್
ಲಖನೌ: ಲೋಕಸಭಾ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಉತ್ತರ ಪ್ರದೇಶ ರಾಜ್ಯದ ಅಜಂಗಡ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಅಖಿಲೇಶ್ ಯಾದವ್ ಸ್ಪರ್ಧಿಸಲಿದ್ದಾರೆ.
ಹಾಲಿ ಈ ಕ್ಷೇತ್ರವನ್ನು ಅಖಿಲೇಶ್ ಯಾದವ್ ತಂದೆ ಹಾಗೂ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಪ್ರತಿನಿಧಿಸುತ್ತಿದ್ದಾರೆ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ಅಲ್ಲಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷ ಘೋಷಿಸಿದೆ.
ತಂದೆಯ ಕ್ಷೇತ್ರವನ್ನು ಮಗನೇ ಕಸಿದುಕೊಂಡಿದ್ದು, ಮುಲಾಯಂ ಸಿಂಗ್ ಯಾದವ್ ಅವರ ರಾಜಕೀಯ ಭವಿಷ್ಯ ಆತಂತ್ರವಾಗಿದೆ. ಚುನಾವಣೆಗೆ ಸ್ಪರ್ಧಿಸುತ್ತಾರಾ ? ಅಥವಾ ರಾಜಕೀಯದಿಂದ ನಿವೃತ್ತಿಯಾಗಲಿದ್ದಾರೆಯೇ ? ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಅಲ್ಲದೇ ಸಮಾಜವಾದಿ ಪಕ್ಷ ಬಿಡುಗಡೆ ಮಾಡಿರುವ ಸ್ಟಾರ್ ಪ್ರಚಾರಕ ಪಟ್ಟಿಯಲ್ಲೂ ಮುಲಾಯಂ ಸಿಂಗ್ ಯಾದವ್ ಹೆಸರಿಲ್ಲ. ಈ ಪಟ್ಟಿಯಲ್ಲಿ ಅಖಿಲೇಶ್ ಯಾದವ್, ರಾಮ್ ಗೋಪಾಲ್ ಯಾದವ್, ಅಜಂಖಾನ್, ಡಿಂಪಲ್ ಯಾದವ್ ಹಾಗೂ ಜಯಬಚ್ಚನ್ ಅವರನ್ನು ಸ್ಟಾರ್ ಪ್ರಚಾರಕರಾಗಿ ಸ್ಥಾನ ಪಡೆದಿದ್ದಾರೆ.
ಆದರೆ, ಈ ಪಟ್ಟಿಯಲ್ಲಿ ಮುಲಾಯಂ ಸಿಂಗ್ ಯಾದವ್ ಅವರ ಹೆಸರು ಕಾಣುತ್ತಿಲ್ಲ. ಈ ಮೂಲಕ ಪಕ್ಷದ ಹಿರಿಯ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರನ್ನು ನಿರ್ಲಕ್ಷಿಸಲಾಗಿದೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics