ದೇಶ

ಚೌಕಿದಾರರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ- ಪ್ರಿಯಾಂಕ ಗಾಂಧಿ

Nagaraja AB
ನವದೆಹಲಿ: ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿಸದ ಉತ್ತರ ಪ್ರದೇಶದ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. 
ಚೌಕಿದಾರರು ಶ್ರೀಮಂತರಿಗೆ ಮಾತ್ರ ಕೆಲಸ ಮಾಡುತ್ತಿದ್ದು,  ಬಡವರ ಬಗ್ಗೆ ಕಾಳಜಿ ಇಲ್ಲ ಎಂದು ಆರೋಪಿಸಿದ್ದಾರೆ.ಕಬ್ಬು ಬೆಳೆಗಾರರಿಗೆ 10 ಸಾವಿರ ಕೋಟಿ ರೂಪಾಯಿ ಬಾಕಿಯನ್ನು ಉತ್ತರ ಪ್ರದೇಶ ಉಳಿಸಿಕೊಂಡಿರುವ ಬಗ್ಗೆ ಮಾಧ್ಯಮಗಳ ವರದಿಯನ್ನು ಟ್ವೀಟರ್ ನಲ್ಲಿ ಪ್ರಿಯಾಂಕ ಗಾಂಧಿ ಹಂಚಿಕೊಂಡಿದ್ದಾರೆ.
10 ಸಾವಿರ ಕೋಟಿ ಬಾಕಿ ಪಾವತಿಯಾಗದೆ ಹಿನ್ನೆಲೆಯಲ್ಲಿ ಕಬ್ಬು ಬೆಳೆಗಾರರ ಮಕ್ಕಳ ಶಿಕ್ಷಣ, ಆಹಾರ, ಆರೋಗ್ಯ ಮತ್ತು ಮುಂದಿನ ಬೆಳೆ ಉತ್ಪಾದನೆ ಎಲ್ಲವೂ ಸ್ಥಗಿತಗೊಂಡಿದೆ. ಆದರೆ, ಚೌಕಿದಾರರು ಶ್ರೀಮಂತರ ಕೆಲಸ ಮಾಡುತ್ತಿದ್ದು, ಬಡವರ ಬಗ್ಗೆ ದಿವ್ಯ ನಿರ್ಲಕ್ಷ್ಯ ತಾಳಿವೆ ಎಂದು ಅವರು ಕಿಡಿಕಾರಿದ್ದಾರೆ.
ಪ್ರಿಯಾಂಕ ಗಾಂಧಿ ಇತ್ತೀಚಿಗೆ ಉತ್ತರ ಪ್ರದೇಶ ಪೂರ್ವದ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ
SCROLL FOR NEXT