ರಾಹುಲ್ ಗಾಂಧಿ ಮೇಲಿನ ನಂಬಿಕೆಯಿಂದಾಗಿ ಕಾಂಗ್ರೆಸ್ ಸೇರಿದ್ದೇನೆ: ಊರ್ಮಿಳಾ ಮಾತೋಂಡ್ಕರ್
ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ....
ನವದೆಹಲಿ: ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ನಾನು ಕಾಂಗ್ರೆಸ್ ಮೇಲೆ ಹಾಗೂ ರಾಹುಲ್ ಗಾಂಧಿ ಅವರ ಮೇಲಿನ ನಂಬಿಕೆಯಿಂದಾಗಿ ಕಾಂಗ್ರೆಸ್ ಸೇರಿದ್ದೇನೆ, ರಾಹುಲ್ ಗಾಂಧಿ ತಮ್ಮ ಜೊತೆ ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗಲಿದ್ದಾರೆ.
ಜವಹರ್ ಲಾಲ್ ನೆಹರು ಮತ್ತು, ಸರ್ದಾರ್ ಪಟೇಲ್ ಹಾಗೂ ಮಹಾತ್ಮ ಗಾಂಧಿ ಅವರು ಬೋಧಿಸಿದ ತತ್ವಗಳಿಂದ ನಾನು ಸ್ಪೂರ್ತಿ ಪಡೆದಿದ್ದೇನೆ ಎಂದು ಹೇಳಿದ್ದಾರೆ. ಮುಂಬಯಿ ಉತ್ತರ ಲೋಕಸಭೆ ಕ್ಷೇತ್ರದಿಂದ ಊರ್ಮಿಳಾ ಸ್ಪರ್ಧಿಸುವ ಸಾಧ್ಯತೆಯಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.