ಸಂಗ್ರಹ ಚಿತ್ರ 
ದೇಶ

ವಾರಣಾಸಿ: ಕಳಪೆ ಆಹಾರದ ಬಗ್ಗೆ ಆರೋಪಿಸಿದ್ದ ಮಾಜಿ ಯೋಧ ತೇಜ್ ಬಹದ್ದೂರ್ ಮೋದಿ ವಿರುದ್ಧ ಕಣಕ್ಕೆ

ಸೇನೆಯಲ್ಲಿ ಸೈನಿಕರಿಗೆ ನೀಡುವ ಆಹಾರ ಕಳಪೆಯಾಗಿರುತ್ತದೆ ಎಂದು ಆರೋಪಿಸಿದ್ದ ಮಾಜಿ ಯೋಧ ತೇಜ್ ಬಹದ್ದೂರ್, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವರ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.

ವಾರಣಾಸಿ: ಸೇನೆಯಲ್ಲಿ ಸೈನಿಕರಿಗೆ ನೀಡುವ ಆಹಾರ ಕಳಪೆಯಾಗಿರುತ್ತದೆ ಎಂದು ಆರೋಪಿಸಿದ್ದ ಮಾಜಿ ಯೋಧ ತೇಜ್ ಬಹದ್ದೂರ್, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವರ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ ವರದಿ ಮಾಡಿದ್ದು, 'ಹರ್ಯಾಣದ ರೇವಾರಿಯ ನಿವಾಸಿಯಾಗಿರುವ ತೇಜ್ ಬಹದ್ದೂರ್ ಯಾದವ್, ವಾರಣಾಸಿಯಲ್ಲಿ ತಾವು ಮೋದಿ ವಿರುದ್ಧ ಸ್ಪರ್ಧೆ ಮಾಡುತ್ತಿದ್ದೇನೆ. ಹಲವು ಮಂದಿ ರಾಜಕಾರಣಿಗಳು ತಮ್ಮ ಪಕ್ಷಕ್ಕೆ ಸೇರುವಂತೆ ಆಹ್ವಾನ ನೀಡಿದ್ದಾರೆ. ಆದರೆ ತಾನು ಪಕ್ಷೇತರ ಅಭ್ಯರ್ಥಿಯಾಗಿಯೇ ಕಣಕ್ಕೆ ಇಳಿಯುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. 
ಅಂತೆಯೇ ತಮಗೆ ಚುನಾನಣೆಯಲ್ಲಿ ಗೆಲುವು-ಸೋಲು ಮುಖ್ಯವಲ್ಲ. ಆದರೆ ಚುನಾವಣೆ ಮುಖಾಂತರ ಯೋಧರ ಸಂಕಷ್ಟ ಅರ್ಥ ಮಾಡಿಕೊಳ್ಳದ ಮೋದಿ ಸರ್ಕಾರ ಮತ್ತು ಭದ್ರತಾ ಪಡೆಯ ಭ್ರಷ್ಟಾಚಾರಗಳ ವಿಚಾರವನ್ನು ಜನತೆಗೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ.
'ನನ್ನ ಉದ್ದೇಶ ಗೆಲುವು ಅಥವಾ ಸೋಲು ಅಲ್ಲ.. ಭದ್ರತಾ ಪಡೆಯನ್ನು ಅದರಲ್ಲೂ ಮುಖ್ಯವಾಗಿ ಅರೆ ಮಿಲಿಟರಿ ಪಡೆಯನ್ನು ಹೇಗೆ ಸರ್ಕಾರ ವಿಫಲಗೊಳಿಸಿದೆ ಎಂದು ಬಿಂಬಿಸುವುದು ನನ್ನ ಉದ್ದೇಶ. ಮೋದಿ ನಮ್ಮ ಸೈನಿಕರ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ. ಆದರೆ ಅವರಿಗಾಗಿ ಮೋದಿ ಏನೂ ಮಾಡಿಲ್ಲ. ನಮ್ಮ ಅರೆ ಮಿಲಿಟರಿ ಪಡೆ ಜವಾನರು ಇತ್ತೀಚೆಗೆ ಪುಲ್ವಾಮಾ ದಾಳಿಯಲ್ಲಿ ಹತರಾಗಿದ್ದಾರೆ. ಇವರಿಗೆ ಸರ್ಕಾರ ಹುತಾತ್ಮರ ಸ್ಥಾನಮಾನ ಕೂಡಾ ನೀಡಿಲ್ಲ' ಎಂದು ತೇಜ್ ಬಹದ್ದೂರ್ ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಯೋಧರಿಗೆ ಕಳಪೆ ಆಹಾರ ವಿತರಿಸಲಾಗುತ್ತಿದೆ ಎಂದು ಆಪಾದಿಸಿದ್ದ ಅವರು ಇದಕ್ಕೆ ಸಂಬಂಧಿಸಿದ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಇದೇ ಕಾರಣಕ್ಕಾಗಿ 2017ರಲ್ಲಿ ಇವರು ಬಿಎಸ್‍ಎಫ್‍ನಿಂದ ವಜಾಗೊಂಡಿದ್ದರು. ಈ ವಜಾ ಆದೇಶವನ್ನು ಅವರು ಪ್ರಶ್ನಿಸಿದ್ದು, ಇದು ಇನ್ನೂ ವಿಚಾರಣೆ ಹಂತದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!