ರಾಹುಲ್ ಗಾಂಧಿ 
ದೇಶ

ಕೇರಳದ ವಯನಾಡು ಕ್ಷೇತ್ರದಿಂದಲೂ ರಾಹುಲ್ ಗಾಂಧಿ ಸ್ಪರ್ಧೆ; ಎ ಕೆ ಆ್ಯಂಟನಿ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವಯನಾಡು ಕ್ಷೇತ್ರದಿಂದ ಸಹ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ...

ನವದೆಹಲಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವಯನಾಡು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಮಾಜಿ ರಕ್ಷಣಾ ಸಚಿವ ಕೇರಳದ ಕಾಂಗ್ರೆಸ್ ಹಿರಿಯ ಮುಖಂಡ ಎ ಕೆ ಆ್ಯಂಟನಿ ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ. ರಾಹುಲ್ ಗಾಂಧಿಯವರನ್ನು ನಾವೆಲ್ಲರೂ ಒತ್ತಾಯಿಸಿದ್ದು ಅವರು ಕೇರಳದ ವಯನಾಡು ಕ್ಷೇತ್ರದಿಂದ ಸ್ಪರ್ಧಿಸಲು ಒಪ್ಪಿದ್ದಾರೆ ಎಂದು ಎ ಕೆ ಆ್ಯಂಟನಿ ಹೇಳಿದ್ದಾರೆ.
ರಾಹುಲ್ ಗಾಂಧಿ ತಮ್ಮ ಸ್ವಕ್ಷೇತ್ರ ಉತ್ತರ ಪ್ರದೇಶದ ಅಮೇಥಿಯಿಂದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.
ಈ ಬಾರಿ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಾರೆ ಎಂದು ಕಳೆದ ಹಲವು ದಿನಗಳಿಂದ ಕೇಳಿಬರುತ್ತಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!