ದೇಶ

ಬಾಲಾಕೋಟ್ ದಾಳಿ ಹೆಸರಲ್ಲಿ ಪ್ರಧಾನಿ ಮೋದಿ ಮತ ಕೇಳುವುದು ನೀತಿ ಸಂಹಿತೆ ಉಲ್ಲಂಘನೆ ಅಲ್ಲ: ಆಯೋಗ

Srinivas Rao BV
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನದ ಬಾಲಾಕೋಟ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಮತ ಕೇಳುವುದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. 
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ತಿಂಗಳು ಲಾತೂರ್ ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಬಾಲಾಕೋಟ್ ನಲ್ಲಿ ಉಗ್ರರ ನೆಲೆ ಮೇಲೆ ವೈಮಾನಿಕ ದಾಳಿ ನಡೆಸಿದ್ದ ಹಾಗೂ ಪುಲ್ವಾಮದಲ್ಲಿ ಪ್ರಾಣತ್ಯಾಗ ಮಾಡಿದ್ದ ಹಿರೋಗಳಿಗೆ ನಿಮ್ಮ ಮೊದಲ ಮತವನ್ನು ಅರ್ಪಿಸಿ ಎಂದು ಯುವ ಸಮೂಹಕ್ಕೆ ಕರೆ ನೀಡಿದ್ದರು. 
ಪ್ರಧಾನಿ ನರೇಂದ್ರ ಮೋದಿ ಅವರ ಈ ಹೇಳಿಕೆಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆಯೋಗಕ್ಕೆ ವಿಪಕ್ಷಗಳು ದೂರು ನೀಡಿದ್ದವು. 
ದೂರಿನ ಬಗ್ಗೆ ಈಗ ಸ್ಪಷ್ಟನೆ ನೀಡಿರುವ ಚುನಾವಣಾ ಆಯೋಗ, ವಿಷಯವನ್ನು ಸಂಪೂರ್ಣವಾಗಿ ಪರಿಶೀಲಿಸಲಾಗಿದೆ. ಆದರೆ ಪ್ರಧಾನಿ ಮೋದಿ ಅವರ ಅಂದಿನ ಭಾಷಣದಲ್ಲಿ ಯಾವುದೇ ನೀತಿ ಸಂಹಿತೆಯೂ ಉಲ್ಲಂಘನೆಯಾಗಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ. 
SCROLL FOR NEXT