ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ 
ದೇಶ

ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಿಲ್ಲವೇಕೆ? ಇಲ್ಲಿದೆ ಕಾರಣ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ದಟ್ಟವಾದ ವದಂತಿ ಹಬ್ಬಿತ್ತು. ಕೊನೆ ಕ್ಷಣದಲ್ಲಿ ....

ಅಮೇಥಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ದಟ್ಟವಾದ ವದಂತಿ ಹಬ್ಬಿತ್ತು. ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಅಜಯ್ ರಾವ್ ಅವರನ್ನು ಕಣಕ್ಕಿಳಿಸಿತು. ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆಯಿಂದ ಹಿಂದೆ ಸರಿದರು.
ತಾವು ಏಕೆ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸಿಲ್ಲ ಎಂಬುದಕ್ಕೆ ಇದೀಗ ಸ್ವತಃ ಪ್ರಿಯಾಂಕಾ ಗಾಂಧಿಯವರೇ ನಿನ್ನೆ ಪ್ರತಿಕ್ರಿಯಿಸಿದ್ದಾರೆ. ಉತ್ತರ ಪ್ರದೇಶದ ಪೂರ್ವ ವಲಯದ 41 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯದ ಮೇಲೆ ಗಮನಹರಿಸುವ ಜವಾಬ್ದಾರಿ ತಮಗಿದ್ದು ಕೇವಲ ಒಂದು ಕ್ಷೇತ್ರ ನೋಡಿಕೊಂಡರೆ ಸಾಲದು ಎಂದು ಹೇಳಿದ್ದಾರೆ.
ನಾನು ಸ್ಪರ್ಧೆಯಿಂದ ಹಿಂದೆ ಸರಿದಿಲ್ಲ. ಉತ್ತರ ಪ್ರದೇಶದ ನಮ್ಮ ಪಕ್ಷದ ಎಲ್ಲಾ ಹಿರಿಯ ನಾಯಕರ ಮತ್ತು ಸಹೋದ್ಯೋಗಿಗಳ ಸಲಹೆ ಪಡೆದಾಗ ನಾನು ಎಲ್ಲಾ 41 ಕ್ಷೇತ್ರಗಳ ಜವಾಬ್ದಾರಿ ವಹಿಸುಕೊಳ್ಳುವ ಅಗತ್ಯವಿದೆ ಎಂದರು. ಅದಕ್ಕಾಗಿ ಸ್ಪರ್ಧಿಸಲಿಲ್ಲ ಎಂದರು. ಅವರು ನಿನ್ನೆ ತಮ್ಮ ಸಹೋದರ ರಾಹುಲ್ ಗಾಂಧಿ ಸ್ಪರ್ಧಿಸುತ್ತಿರುವ ಅಮೇಥಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ವೇಳೆ ಸುದ್ದಿಗಾರರಿಗೆ ಈ ಪ್ರತಿಕ್ರಿಯೆ ನೀಡಿದರು. ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶದ ಪೂರ್ವ ಭಾಗದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ನಮ್ಮ ಎಲ್ಲಾ ಅಭ್ಯರ್ಥಿಗಳು ಅವರ ಕ್ಷೇತ್ರಗಳಿಗೆ ನಾನು ಹೋಗಿ ಪ್ರಚಾರ ಮಾಡಬೇಕೆಂದು ಬಯಸುತ್ತಾರೆ. ನೀನು ಒಂದೇ ಕ್ಷೇತ್ರದ ಮೇಲೆ ಗಮನಹರಿಸಿದರೆ ಅವರಿಗೆ ಬೇಸರವಾಗಬಹುದು ಎಂಬ ಕಾರಣದಿಂದ ಸ್ಪರ್ಧೆಯಿಂದ ಹಿಂದೆ ಸರಿದೆ ಎಂದರು ಪ್ರಿಯಾಂಕಾ ಗಾಂಧಿ.
ಉತ್ತರ ಪ್ರದೇಶ ರಾಜ್ಯದಲ್ಲಿ ಒಟ್ಟು 80 ಲೋಕಸಭಾ ಕ್ಷೇತ್ರಗಳಿದ್ದು ಉಳಿದ ಕ್ಷೇತ್ರಗಳ ಉಸ್ತುವಾರಿಯನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಜ್ಯೋತಿರಾಧಿತ್ಯ ಸಿಂಧ್ಯಾ ವಹಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಸಮರ್ಥರಲ್ಲದಿದ್ದರೆ ಮೊದಲು ನೀವು ರಾಜಿನಾಮೆ ಕೊಡಿ: CJI ಸೂರ್ಯಕಾಂತ್ ರಾಜೀನಾಮೆಗೆ Congress ಒತ್ತಾಯ!

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

ಸ್ಮಿತ್ ಮಚ್ಚರ್ ಬಗ್ಗೆ ಮೌನವೇಕೆ: ನನ್ನ ಆದರ್ಶ ಧ್ರುವ ರಾಠಿ ಅಲ್ಲ: ಶಿವಸೇನೆ UBT ತೊರೆದ ರಾಷ್ಟ್ರೀಯ ವಕ್ತಾರ ಆನಂದ್ ದುಬೆ!