ಫೋನಿ ಚಂಡಮಾರುತ: ಆಂಧ್ರ ಪ್ರದೇಶದ ನಾಲ್ಕು ಜಿಲ್ಲೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಸಡಿಲ
ಫೋನಿ ಚಂಡಮಾರುತದ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿಆಂಧ್ರಪ್ರದೇಶದ ಪೂರ್ವ ಗೋದಾವರಿ, ವಿಶಾಖಪಟ್ಟಣಂ, ವಿಜಯನಗರಂ ಹಾಗೂ ಶ್ರೀಕಾರ್ಕುಳಂನಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಸಡಿಲಗೊಳಿಸಲಾಗಿದೆ.
ಅಮರಾವತಿ: ಫೋನಿ ಚಂಡಮಾರುತದ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿಆಂಧ್ರಪ್ರದೇಶದ ಪೂರ್ವ ಗೋದಾವರಿ, ವಿಶಾಖಪಟ್ಟಣಂ, ವಿಜಯನಗರಂ ಹಾಗೂ ಶ್ರೀಕಾರ್ಕುಳಂನಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಸಡಿಲಗೊಳಿಸಲಾಗಿದೆ.
ಫೋನಿ ಚಂಡಮಾರುತದಿಂದ ಉಂಟಾಗುವ ಸಮಸ್ಯೆಗಳನ್ನು ನಿವಾರಿಸುವ ಹಾಗೂ ಪರಿಹಾರ ಕಾರ್ಯ ಕೈಗೊಳ್ಳುವ ನಿಟ್ಟಿನಲ್ಲಿ ಈ ಜಿಲ್ಲೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಸಡಿಲಗೊಳಿಸುವ ಪ್ರಸ್ತಾವಕ್ಕೆ ಭಾರತೀಯ ಚುನಾವಣಾ ಆಯೋಗ ಅನುಮೋದನೆ ನೀಡಿದೆ.
ಫೋನಿ ಚಂಡಮಾರುತದ ಹಿನ್ನೆಲೆಯಲ್ಲಿ ಈ ನಾಲ್ಕು ಜಿಲ್ಲೆಗಳಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಸಡಿಲಗೊಳಿಸುವಂತೆ ಕೋರಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು.
ಫೋನಿ ಚಂಡಮಾರುತದಿಂದ ಗಂಟೆಗೆ 200 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಪೂರ್ವ ಗೋದಾವರಿ, ವಿಶಾಖಪಟ್ಟಣಂ, ವಿಜಯನಗರಂ ಹಾಗೂ ಶ್ರೀ ಕಾರ್ಕುಳಂನಲ್ಲಿ ಹೈ ಆಲರ್ಟ್ ಘೋಷಿಸಲಾಗಿದೆ ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.