ದೇಶ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; 6ನೇ ಪ್ರಕರಣದಲ್ಲೂ ಪ್ರಧಾನಿ ಮೋದಿಗೆ ಕ್ಲೀನ್‌ ಚಿಟ್

Srinivasamurthy VN
ನವದೆಹಲಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ಆರನೇ ಪ್ರಕರಣದಲ್ಲೂ ಪ್ರಧಾನಿ ನರೇಂದ್ರ ಮೋದಿಗೆ ಚುನಾವಣಾ ಆಯೋಗ ಕ್ಲೀನ್‌ ಚಿಟ್ ನೀಡಿದೆ. 
ಹೌದು.. ಈ ಹಿಂದೆ ಗುಜರಾತ್‌ ನ ಪಠಾಣ್‌ ನಲ್ಲಿ ಮೋದಿ ಅವರು ಏಪ್ರಿಲ್ 21ರಂದು ಮಾಡಿದ್ದ ಭಾಷಣದಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಲಾಗಿತ್ತು. ಬಾಲಾಕೋಟ್ ದಾಳಿಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ನೀಡಿದ್ದ ಹೇಳಿಕೆ ವಿವಾದಕ್ಕೀಡಾಗಿತ್ತು. 'ಬಾಲಾಕೋಟ್ ದಾಳಿಯಲ್ಲಿ ಪಾಕಿಸ್ತಾನಕ್ಕೆ ಸೆರೆಸಿಕ್ಕಿದ್ದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡುವಂತೆ ಭಾರತ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿತ್ತು. ಇದೇ ಕಾರಣಕ್ಕೆ ಪಾಕಿಸ್ತಾನ ಅಭಿನಂದನ್ ವರ್ಧಮಾನ್ ರನ್ನು ಬಿಡುಗಡೆ ಮಾಡಿತ್ತು ಎಂದು ಮೋದಿ ಹೇಳಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ದೂರು ದಾಖಲಾಗಿತ್ತು. 
ಪ್ರಕರಣದ ವಿಚಾರಣೆ ನಡೆಸಿದ ಆಯೋಗ ಸುಧೀರ್ಧ ವಿಚಾರಣೆ ಬಳಿಕ  ಪ್ರಚಾರದಲ್ಲಿ ಸೇನೆಯ ಹೆಸರು ಬಳಕೆಯ ಮೇಲೆ ಇದ್ದ ಮಾರ್ಗಸೂಚಿಯನ್ನು ಮೋದಿ ಅವರು ವಾರಾಣಸಿಯಲ್ಲಿ ತಮ್ಮ ಭಾಷಣದಲ್ಲಿ ಉಲ್ಲಂಘಿಸಿಲ್ಲ ಎಂದು ಶುಕ್ರವಾರ ಸ್ಪಷ್ಟಪಡಿಸಿತ್ತು. ಈ ಪ್ರಕರಣ ಸೇರಿದಂತೆ ಪ್ರಧಾನಿ ಮೋದಿ ವಿರುದ್ಧ ಎಲ್ಲ ಆರೂ ಪ್ರಕರಣಗಳಲ್ಲಿ ಆಯೋಗ ಕ್ಲೀನ್ ಚಿಟ್ ನೀಡಿದೆ.
ಅಲ್ಲದೆ ಅಮಿತ್ ಶಾ ಅವರು ನಾಗಪುರ ಹಾಗೂ ನಾಡಿಯಾದಲ್ಲಿ ಚುನಾವಣಾ ಭಾಷಣದ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪಗಳನ್ನೂ ಆಯೋಗ ಕೈಬಿಟ್ಟಿತ್ತು.
SCROLL FOR NEXT