ಹಕ್ಕು ಚಲಾಯಿಸಿದ ಕೇಂದ್ರ ಸಚಿವ ರಾಜವರ್ಧನ್ ಸಿಂಗ್ ರಾಥೋರ್ ಹಾಗೂ ಕುಟುಂಬ 
ದೇಶ

ಲೋಕಸಭೆ ಚುನಾವಣೆ 2019: ಮಧ್ಯಾಹ್ನ 3.30ರ ಹೊತ್ತಿಗೆ ಶೇ.50.70ರಷ್ಚು ಮತದಾನ

ಲೋಕಸಭಾ ಚುನಾವಣೆಯ 5ನೇ ಹಂತದ ಮತದಾನ ಪ್ರಕ್ರಿಯೆ ಚಾಲನೆಯಲ್ಲಿದ್ದು, ಮಧ್ಯಾಹ್ನ 3.30ರ ಸುಮಾರಿಗೆ ಶೇ.50.70 ಮತದಾನವಾಗಿದೆ...

ನವದೆಹಲಿ: ಲೋಕಸಭಾ ಚುನಾವಣೆಯ 5ನೇ ಹಂತದ ಮತದಾನ ಪ್ರಕ್ರಿಯೆ ಚಾಲನೆಯಲ್ಲಿದ್ದು, ಮಧ್ಯಾಹ್ನ 3.30ರ ಸುಮಾರಿಗೆ ಶೇ.50.70 ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗ ತನ್ನ ವೆಬ್ ಸೈಟ್ ನಲ್ಲಿ ಮಾಹಿತಿ ನೀಡಿದ್ದು, ಬಿಹಾರದಲ್ಲಿ ಶೇ.44.08 ರಷ್ಟು, ಜಮ್ಮು ಮತ್ತು ಕಾಶ್ಮೀರದಲ್ಲಿ ಶೇ. 15.34ರಷ್ಟು, ಜಾರ್ಖಂಡ್ ನಲ್ಲಿ ಶೇ.582.63ರಷ್ಟು, ಮಧ್ಯ ಪ್ರದೇಶದಲ್ಲಿ ಶೇ. 54.33ರಷ್ಟು, ರಾಜಸ್ಥಾನದಲ್ಲಿ 50.39ರಷ್ಟು, ಉತ್ತರ ಪ್ರದೇಶದಲ್ಲಿ ಶೇ. 44.89ರಷ್ಟು ಮತ್ತು ಪಶ್ಚಿಮ ಬಂಗಾಳದಲ್ಲಿ ಶೇ.62.84ರಷ್ಟು ಮತದಾನವಾಗಿದೆ.
ಇಂದು ಒಟ್ಟು 7 ರಾಜ್ಯಗಳ 51 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಮತದಾನದಲ್ಲಿ ಸುಮಾರು 8.76 ಕೋಟಿ ಜನ ತಮ್ಮ ಮತದಾನ ಹಕ್ಕು ಚಲಾವಣೆ ಮಾಡಲಿದ್ದು, 674 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಮಾಡಲಿದ್ದಾರೆ. 
ಉತ್ತರಪ್ರದೇಶದ 14 ಕ್ಷೇತ್ರ, ರಾಜಸ್ಥಾನದ 12, ಪಶ್ಚಿಮ ಬಂಗಾಳ ಮತ್ತು ಮಧ್ಯಪ್ರದೇಶದಲ್ಲಿ ತಲಾ 7 ಕ್ಷೇತ್ರ, ಬಿಹಾರದಲ್ಲಿನ 5, ಜಾರ್ಖಂಡ್​​ ನ 4, ಜಮ್ಮು ಮತ್ತು ಕಾಶ್ಮೀರದ 2  (ಅನಂತ್ ನಾಗ್ ಹಾಗೂ ಲಡಾಖ್) ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ. 
ಕೇಂದ್ರ ಸಚಿವರಾದ ರಾಜನಾಥ್​ ಸಿಂಗ್​, ಸ್ಮೃತಿ ಇರಾನಿ, ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಹಾಗೂ ಸೋನಿಯಾ ಗಾಂಧಿ ಸೇರಿದಂತೆ ಒಟ್ಟು 674 ಅಭ್ಯರ್ಥಿಗಳು 5ನೇ ಹಂತದ ಚುನಾವಣಾ ಕಣದಲ್ಲಿದ್ದಾರೆ.
ಲಖನೌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಗೃಹ ಸಚಿವ ರಾಜನಾಥ್​ ಸಿಂಗ್ ಇಂದು ಬೆಳಗ್ಗೆಯೇ ಸ್ಕಾಲರ್ಸ್​ ಹೋಮ್ ಹೈಸ್ಕೂಲ್​​ನ ಮತಗಟ್ಟೆ ಸಂಖ್ಯೆ 333ಕ್ಕೆ ತೆರಳಿ ಮತ ಚಲಾಯಿಸಿದರು. ಅಂತೆಯೇ ಸಚಿವ ರಾಜ್ಯವರ್ಧನ್​ ಸಿಂಗ್ ರಾಥೋಡ್ ಮತ್ತು ಪತ್ನಿ ಗಾಯತ್ರಿ ರಾಥೋಡ್​  ಜೈಪುರದಲ್ಲಿ ತಮ್ಮ ಹಕ್ಕು ಚಲಾಯಿಸಿದರು. ಬಿಎಸ್​​ಪಿ ಮುಖ್ಯಸ್ಥೆ ಮಾಯಾವತಿ ಲಖನೌನ ಸಿಟಿ ಮಾಂಟೆಸ್ಸರಿ ಇಂಟರ್​ ಸ್ಕೂಲ್ ​ನ ಮತಗಟ್ಟೆಯಲ್ಲಿ ಮತದಾನ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!