ದಿಗ್ವಿಜಯ್ ಸಿಂಗ್ ಗೆಲ್ಲಿಸಲು ಬಿಜೆಪಿ ಮಾಜಿ ಸಚಿವ ಕಂಪ್ಯೂಟರ್ ಬಾಬಾ 'ಹಠಯೋಗ'
ಬಿಜೆಪಿಯ ಮಾಜಿ ಸಚಿವ ಕಂಪ್ಯೂಟರ್ ಬಾಬಾ ಅವರು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಪರ ಪ್ರಚಾರ ಮಾಡುತ್ತಿದ್ದಾರೆ....
ಭೂಪಾಲ್: ಬಿಜೆಪಿಯ ಮಾಜಿ ಸಚಿವ ಕಂಪ್ಯೂಟರ್ ಬಾಬಾ ಅವರು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಪರ ಪ್ರಚಾರ ಮಾಡುತ್ತಿದ್ದಾರೆ.
ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ದಿಗ್ವಿಜಯ್ ಸಿಂಗ್ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಅವರ ಗೆಲುವಿಗಾಗಿ ಕಂಪ್ಯೂಟರ್ ಬಾಬಾ ಅವರು ಹಠ ಯೋಗ ಮಾಡುತ್ತಿದ್ದಾರೆ. ಸಾವಿರಾರು ಸಾಧುಗಳು ಕೂಡ ಹಠ ಯೋಗದಲ್ಲಿ ಭಾಗಿಯಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಐದು ವರ್ಷ ಸರ್ಕಾರ ನಡೆಸಿದರೂ ರಾಮ ಮಂದಿರ ನಿರ್ಮಾಣ ಮಾಡಲಿಲ್ಲ. ರಾಮ ಮಂದಿರ ಇಲ್ಲ ಎಂದ ಮೇಲೆ ಮೋದಿಯೂ ಇಲ್ಲ ಎಂದು ಹೇಳಿದ್ದಾರೆ.
ಕಂಪ್ಯೂಟರ್ ಬಾಬಾ ನೇತೃತ್ವದಲ್ಲಿ ದಿಗ್ವಿಜಯ್ ಸಿಂಗ್ ಅವರು ಕುಟುಂಬ ಸಮೇತ ವಿಶೇಷ ಪೂಜೆ ನೆರವೇರಿಸಿದರು. ಇತ್ತ ಅನೇಕ ಸಾಧುಗಳು ಹಠ ಯೋಗದಲ್ಲಿ ನಿರತರಾಗಿದ್ದಾರೆ.
ದಿಗ್ವಿಜಯ್ ಸಿಂಗ್ ಅವರಿಗೆ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ಸಾಧ್ವಿ ಪ್ರಜ್ಞಾಸಿಂಗ್ ಕಣಕ್ಕೆ ಇಳಿದಿದ್ದಾರೆ. ಹೀಗಾಗಿ ಈ ನಾಯಕರ ಮಧ್ಯೆ ಭರ್ಜರಿ ಪೈಪೋಟಿ ಏರ್ಪಟ್ಟಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.