ಮಮತಾ ಬ್ಯಾನರ್ಜಿ 
ದೇಶ

ಮಾಫಿಯಾ ಜತೆ ನಂಟು ಸಾಬೀತುಪಡಿಸಿ, ಇಲ್ಲವೆ ಸಾರ್ವಜನಿಕವಾಗಿ ಉಟ್ ಬಸ್ಕಿ ಹೊಡಿರಿ: ಮೋದಿಗೆ ದೀದಿ ಸವಾಲು

ಕಲ್ಲಿದ್ದಲು ಮಾಫಿಯಾ ಜೊತೆ ತೃಣಮೂಲ ಕಾಂಗ್ರೆಸ್ ನಂಟು ಹೊಂದಿದೆ ಎಂಬ ನಿಮ್ಮ ಆರೋಪವನ್ನು ಸಾಬೀತುಪಡಿಸಿ. ಇಲ್ಲವೆ ಸಾರ್ವಜನಿಕವಾಗಿ ಉಟ್ ಬಸ್ಕಿ....

ಕೊಲ್ಕತಾ: ಕಲ್ಲಿದ್ದಲು ಮಾಫಿಯಾ ಜೊತೆ ತೃಣಮೂಲ ಕಾಂಗ್ರೆಸ್ ನಂಟು ಹೊಂದಿದೆ ಎಂಬ ನಿಮ್ಮ ಆರೋಪವನ್ನು ಸಾಬೀತುಪಡಿಸಿ. ಇಲ್ಲವೆ ಸಾರ್ವಜನಿಕವಾಗಿ ಉಟ್ ಬಸ್ಕಿ ಹೊಡೆಯುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗುರುವಾರ ಸವಾಲು ಹಾಕಿದ್ದಾರೆ.
ತಮ್ಮ ಪಕ್ಷದ ಅಭ್ಯರ್ಥಿಯೊಬ್ಬರ ವಿರುದ್ಧ ಪ್ರಧಾನಿ ಮೋದಿ ಮಾಡಿದ ಆರೋಪಕ್ಕೆ ಮಮತಾ ಬ್ಯಾನರ್ಜಿ ಅವರು ಇಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಆರೋಪ ಸಾಬೀತು ಮಾಡುವಂತೆ ಮೋದಿ ಅವರಿಗೆ ಅವರು ಸವಾಲು ಹಾಕಿದ್ದಾರೆ. ಆರೋಪ ಸಾಬೀತು ಮಾಡಲು ಸಾಧ್ಯವಾಗದಿದ್ದರೆ ಕೈಗಳಿಂದ ಕಿವಿ ಹಿಡಿದುಕೊಂಡು 100 ಉಟ್ ಬೈಸ್ಕಿ ಹೊಡೆಯುವಂತೆಯೂ ಪ್ರಧಾನಿಗೆ ಸವಾಲು ಹಾಕಿದ್ದಾರೆ. 
ಒಂದು ವೇಳೆ ಪ್ರಧಾನಿ ಮೋದಿ ಆರೋಪ ಸಾಬೀತುಪಡಿಸಿದೆ ತಾವು ಪಶ್ಚಿಮ ಬಂಗಾಳದ 42 ಲೋಕಸಭಾ ಕ್ಷೇತ್ರಗಳ ಟಿಎಂಸಿ ಅಭ್ಯರ್ಥಿಗಳನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ.
ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಕಲ್ಲಿದ್ದಲು ಲೂಟಿ ಆರೋಪ ಮಾಡಿದ್ದ ಪ್ರಧಾನಿ ಮೋದಿ, ಕಲ್ಲಿದ್ದಲು ಗಣಿಗಳಲ್ಲಿ ತೃಣಮೂಲ ಕಾಂಗ್ರೆಸ್​ನ ಮಾಫಿಯಾ ರಾಜ್ ನಡೆಯುತ್ತಿರುವುದು ನಿಮಗೆ ಚೆನ್ನಾಗಿ ಗೊತ್ತಿದೆ. ಗಣಿ ಕಾರ್ಮಿಕರು ಕೂಲಿ ಹಣವನ್ನು ಟಿಎಂಸಿ ಮುಖಂಡರು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!