ದೇಶ

ಟೈಮ್ ಮ್ಯಾಗಜಿನ್ ಲೇಖಕ ಪಾಕಿಸ್ತಾನಿ, ಪ್ರಧಾನಿ ಮೋದಿ ಗೌರವಕ್ಕೆ ಧಕ್ಕೆ ತರುವ ಯತ್ನ: ಬಿಜೆಪಿ

Lingaraj Badiger
ನವದೆಹಲಿ: ಅಮೆರಿಕದ ಟೈಮ್‌ ನಿಯತಕಾಲಿಕೆ ತನ್ನ ಅಂತಾರಾಷ್ಟ್ರೀಯ ಆವೃತ್ತಿಯ ಮುಖಪುಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಪ್ರಕಟಿಸಿ, ಅದಕ್ಕೆ 'ಇಂಡಿಯಾಸ್‌ ಡಿವೈಡರ್‌ ಇನ್‌ ಚೀಫ್'(ಭಾರತದ ಮುಖ್ಯ ವಿಭಜಕ) ಎಂಬ ಶೀರ್ಷಿಕೆ ನೀಡಿದ್ದನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಅದರ ಲೇಖಕ ಪಾಕಿಸ್ತಾನಿಯಾಗಿದ್ದು, ಮೋದಿ ಗೌರವಕ್ಕ ಧಕ್ಕೆ ತರುವ ಯತ್ನ ಮಾಡಿದ್ದಾರೆ ಎಂದು ಆರೋಪಿಸಿದೆ.
ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರು, ಟೈಮ್ ಮ್ಯಾಗಜಿನ್ ಲೇಖಕ ಪಾಕಿಸ್ತಾನಿಯಾಗಿದ್ದು, ಪ್ರಧಾನಿ ಮೋದಿ ವಿರುದ್ಧ ಅಪಪ್ರಚಾರ ಮಾಡುವ ಪಾಕ್ ಅಜೆಂಡಾವನ್ನು ಅನುಸರಿಸಿದ್ದಾರೆ. ಪಾಕಿಸ್ತಾನಿಯಿಂದ ಉತ್ತಮ ಲೇಖನ ನಿರೀಕ್ಷಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಟೈಮ್ ಮ್ಯಾಗಜಿನ್ ಲೇಖನವನ್ನು ರಿಟ್ವೀಟ್ ಮಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಸಂಬಿತ್ ಪಾತ್ರಾ ಅವರು, ಪ್ರಧಾನಿ ಮೋದಿ ಸರ್ಕಾರ ಹಲವು ಕಲ್ಯಾಣ ಕಾರ್ಯಗಳನ್ನು ಮಾಡಿದೆ. ಮೋದಿ ನೇತೃತ್ವದಲ್ಲಿ ನವ ಭಾರತ ನಿರ್ಮಾಣವಾಗುತ್ತಿದೆ ಎಂದಿದ್ದಾರೆ.
ಇದೇ ವೇಳೆ ಪ್ರಧಾನಿ ಮೋದಿಯನ್ನು ದುಲ್ಹನ್‌ ಗೆ ಹೋಲಿಸಿ ವ್ಯಂಗ್ಯವಾಡಿರುವ ಕಾಂಗ್ರೆಸ್‌ ನಾಯಕ ನವಜೋತ್‌ ಸಿಂಗ್‌ ಸಿಧು ಅವರ ಹೇಳಿಕೆಯು ಕಾಂಗ್ರೆಸ್‌ ಪಕ್ಷದ ಜನಾಂಗೀಯ ಮತ್ತು ಲಿಂಗ ವಿರೋಧಿ ಮನೋಭಾವವನ್ನು ತೋರಿಸುತ್ತದೆ ಎಂದು ತಿರುಗೇಟು ನೀಡಿದರು.
SCROLL FOR NEXT