ಉತ್ತರ ಪ್ರದೇಶದ ಕುಶಿನಗರದಲ್ಲಿ ಮಾತನಾಡಿದ ಪಿಎಂ ನರೇಂದ್ರ ಮೋದಿ 
ದೇಶ

ನನ್ನ ಜಾತಿ ಬಡತನ, ಬಡವರನ್ನು ಉದ್ಧಾರ ಮಾಡುವುದೇ ನನ್ನ ಗುರಿ; ಮಾಯಾವತಿಗೆ ಪಿಎಂ ಮೋದಿ ಟಾಂಗ್

ತಾವು ಹಿಂದುಳಿದ ಜಾತಿಯಲ್ಲಿ ಹುಟ್ಟಿದರೂ ಕೂಡ ಅಂತಹ ವಿಷಯದಲ್ಲಿ ರಾಜಕೀಯ ...

ಕುಶಿನಗರ್(ಉತ್ತರ ಪ್ರದೇಶ): ತಾವು ಹಿಂದುಳಿದ ಜಾತಿಯಲ್ಲಿ ಹುಟ್ಟಿದರೂ ಕೂಡ ಅಂತಹ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
ಉತ್ತರ ಪ್ರದೇಶದ ಕುಶಿನಗರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಇಂದು ಮಾತನಾಡಿದ ಅವರು, ಬಡತನ ನನ್ನ ಜಾತಿ. ನನ್ನಲ್ಲಿ ಇರುವುದು ಒಂದೇ ಜಾತಿ, ಅದು ಬಡವರು, ನಾನು ಬಡತನ ನೋಡಿದ್ದೇನೆ, ಅದರ ನೋವು ಏನೆಂದು ನನಗೆ ಗೊತ್ತು, ಬಡತನವನ್ನು ಹೋಗಲಾಡಿಸಲು ನಿರಂತರ ಹೋರಾಡುತ್ತೇನೆ ಎಂದರು.
ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಸೇರಿದಂತೆ ವಿರೋಧಪಕ್ಷದವರು ಮೋದಿಯವರ ಜಾತಿಯ ವಿಚಾರವಾಗಿ ಆರೋಪ ಮಾಡುತ್ತಾ ಬಂದಿದ್ದರು. ಮೋದಿಯೊಬ್ಬ ನಕಲಿ ದಲಿತ ನಾಯಕ, ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಚುನಾವಣಾ ಲಾಭಕ್ಕಾಗಿ ತಮ್ಮ ಜಾತಿಯನ್ನು ಹಿಂದುಳಿದ ವರ್ಗಗಗಳಲ್ಲಿ ಸೇರಿಸಿದ್ದರು ಎಂದು ಮಾಯಾವತಿ ವಾಗ್ದಾಳಿ ನಡೆಸಿದ್ದರು,

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!

'ತಪ್ಪು ನಿರ್ಧಾರ ತೆಗೆದುಕೊಂಡಿದ್ದೀರಿ, ಅದರ ಬೆಲೆ ತೆರಬೇಕಾಗುತ್ತದೆ': Hormuz ಬಂದ್ ಮಾಡಿದ ಇರಾನ್, ಅಮೆರಿಕ ಮತ್ತೊಂದು ವೈಮಾನಿಕ ದಾಳಿ

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್