ದೇಶ

ಮಾಯಾವತಿ-ಅಖಿಲೇಶ್ ಒಗ್ಗೂಡಿಸಿದ ಅವಧಿಗಿಂತಲೂ ಹೆಚ್ಚು ಅವಧಿಗೆ ಸಿಎಂ ಆಗಿದ್ದೆ: ಮೋದಿ

Srinivas Rao BV
ಲಖನೌ: ತಮ್ಮ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಅಥವಾ ವಿದೇಶಿ ಬ್ಯಾಂಕ್ ಗಳಲ್ಲಿ ಹಣ ಇಟ್ಟಿರುವ ಆರೋಪವನ್ನು ಸಾಬೀತುಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳಿಗೆ ಸವಾಲು ಹಾಕಿದ್ದಾರೆ. 
ಪೂರ್ವ ಉತ್ತರ ಪ್ರದೇಶದಲ್ಲಿ ಮೇ.14 ರಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಮಹಾಮಿಲಾವಟಿ (ಮಹಾ ಕಲಬೆರಕೆ) ಗೆ ನಾನು ಬಹಿರಂಗ ಸವಾಲು ಹಾಕುತ್ತಿದ್ದೇನೆ, ನನಗೆ ಸಂಬಂಧಿಸಿದ ಬೇನಾಮಿ ಆಸ್ತಿ, ಫಾರ್ಮ್ ಹೌಸ್, ಶಾಪಿಂಗ್ ಕಾಂಪ್ಲೆಕ್ಸ್ ಅಥವಾ ವಿದೇಶಿ ಬ್ಯಾಂಕ್ ಗಳಲ್ಲಿ ಹಣ ಇವು ಯಾವುದಾದರೂ ಇದ್ದರೆ ಅದನ್ನು ಸಾಬೀತುಪಡಿಸಲಿ ಎಂದು ಸವಾಲು ಹಾಕಿದ್ದಾರೆ. 
ಈ ಲೋಕಸಭಾ ಚುನಾವಣೆಯಲ್ಲಿ ಜನತೆ ಮಹಾಮಿಲಾವಟಿ ಪಕ್ಷಗಳಿಗೆ ತಕ್ಕ ಉತ್ತರ ನೀಡಲಿದ್ದಾರೆ. ಉತ್ತರ ಪ್ರದೇಶದಲ್ಲಿ ಮಾಯಾವತಿ, ಅಖಿಲೇಶ್ ಯಾದವ್ ಇಬ್ಬರ ಅವಧಿಯನ್ನೂ ಒಟ್ಟುಗೂಡಿಸಿದಕ್ಕಿಂತಲೂ ಹೆಚ್ಚಿನ ಅವಧಿಯನ್ನು ನಾನು ಗುಜರಾತ್ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದೇನೆ. ನಾನೂ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದೇನೆ ಹಾಗೂ ಇತರರನ್ನೂ ಸ್ಪರ್ಧಿಸುವಂತೆ ಮಾಡಿದ್ದೇನೆ. ಆದರೆ ಎಂದಿಗೂ ನನ್ನ ಜಾತಿ ಯ ಸಹಾಯವನ್ನು ಚುನಾವಣೆ ಗೆಲ್ಲುವುದಕ್ಕೆ ಬಳಸಿಕೊಂಡಿಲ್ಲ ಎಂದು ಮೋದಿ ಹೇಳಿದ್ದಾರೆ. 
SCROLL FOR NEXT