ಉತ್ತರ ಕೋಲ್ಕತ್ತಾದಲ್ಲಿ ಪಕ್ಷದ ಅಭ್ಯರ್ಥಿ ರಾಹುಲ್ ಸಿನ್ಹಾ ಪರ ಪ್ರಚಾರ ನಡೆಸಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ 
ದೇಶ

ಇಲ್ಲಿಗೆ ನಾನು ಹೊರಗಿನವನಾದರೆ, ದೆಹಲಿಗೆ ದೀದಿ ಕೂಡ ಹೊರಗಿನವರಲ್ಲವೇ?: ಅಮಿತ್ ಶಾ ಪ್ರಶ್ನೆ

ಅಮಿತ್ ಶಾ ಹೊರಗಿನವರು ಎಂಬ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ಅಧ್ಯಕ್ಷ ಅಮಿತಾ ಶಾ, ಪಕ್ಷದ ಪರವಾಗಿ...

ಕೋಲ್ಕತ್ತಾ: ಅಮಿತ್ ಶಾ ಹೊರಗಿನವರು ಎಂಬ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ಅಧ್ಯಕ್ಷ ಅಮಿತಾ ಶಾ, ಪಕ್ಷದ ಪರವಾಗಿ ಪ್ರಚಾರ ಮಾಡಲು ರಾಜ್ಯಕ್ಕೆ ಬಂದಿದ್ದು ಬೇರೆ ಯಾವ ಉದ್ದೇಶಕ್ಕೂ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.
ಭಾರತ ದೇಶದ ಒಳಗಿರುವ ರಾಜ್ಯ ಪಶ್ಚಿಮ ಬಂಗಾಳಕ್ಕೆ ಬರುವುದಕ್ಕೆ ತಮ್ಮನ್ನು ಹೊರಗಿನವರು ಎಂದು ಕರೆಯುವ ಮಮತಾ ಬ್ಯಾನರ್ಜಿ ಅವರು ದೆಹಲಿಗೆ ಬಂದಾಗ ಅವರನ್ನು ನಾವು ಹೊರಗಿನವರು ಎಂದು ಕರೆಯಬಹುದಲ್ಲವೇ ಎಂದು ಪ್ರಶ್ನಿಸಿದ್ದಾರೆ.
ನಾನು ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷನಾಗಿ ನನ್ನ ಪಕ್ಷದ ಅಭ್ಯರ್ಥಿ ಪರವಾಗಿ ಇಲ್ಲಿಗೆ ಪ್ರಚಾರಕ್ಕೆ ಬಂದಿದ್ದೇನೆ. ಇಲ್ಲಿಗೆ ಬಂದರೆ ಹೊರಗಿನವರು ಎಂದು ಹೇಳುವ ಮಮತಾ ಬ್ಯಾನರ್ಜಿಯವರ ಹೇಳಿಕೆ ಎಂತಹದ್ದು? ಪಶ್ಚಿಮ ಬಂಗಾಳದ ಒಬ್ಬ ಪ್ರಜೆ ಮುಂಬೈ ಅಥವಾ ಬೆಂಗಳೂರಿಗೆ ಹೋದರೆ ಅವರನ್ನು ಹೊರಗಿನವರು ಎಂದು ಕರೆಯುತ್ತೀರಾ? ಮಮತಾ ದೀದಿ ದೆಹಲಿಗೆ ಹೋದರೆ ಅವರನ್ನು ಹೊರಗಿನವರು ಎನ್ನುತ್ತೀರಾ ಎಂದು ಅಮಿತ್ ಶಾ ಕೇಳಿದ್ದಾರೆ.
ಹೊರಗಿನವರಾದ ಅಮಿತ್ ಶಾ ಇಲ್ಲಿಗೆ ಬಂದು ಜನರನ್ನು ವಿಭಜಿಸಲು ನೋಡುತ್ತಾರೆ ಎಂಬ ಮಮತಾ ಬ್ಯಾನರ್ಜಿ ಹೇಳಿಕೆಗೆ ಅಮಿತ್ ಶಾ ಅವರ ಆರೋಪ ಇದಾಗಿದೆ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ನಾನಾಗಲಿ ಅಥವಾ ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ಕೈಲಾಶ್ ವಿಜಯ್ ವರ್ಜಿಯಾ ಮುಖ್ಯಮಂತ್ರಿಯಾಗುವುದಿಲ್ಲ, ಬಂಗಾಳಿಯರೊಬ್ಬರು ಮುಖ್ಯಮಂತ್ರಿಯಾಗುತ್ತಾರೆ ಎಂದು  ಇದೇ ಸಂದರ್ಭದಲ್ಲಿ ಅಮಿತ್ ಶಾ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!