ಕೇದಾರನಾಥ,ಬದರೀನಾಥ ದೇಗುಲಗಳಿಗೆ ಭೇಟಿ ನೀಡಲು ಮೋದಿಗೆ ಆಯೋಗದ ಅನುಮತಿ
ಪ್ರಧಾನಿ ನರೇಂದ್ರ ಮೋದಿ ಹಿಮಾಲಯದ ತಪ್ಪಲಿನ ಕೇದಾರ್ ನಾಥ ಹಾಗೂ ಬದರೀನಾಥ ದೇವಾಲಯಗಳಿಗೆ ಭೇಟಿ ನೀಡಲು ಚುನಾವಣಾ ಆಯೋಗ ಅನುಮತಿ ನೀಡಿದೆ. ಮಾದರಿ ನೀತಿ ಸಂಹಿತೆ ಇನ್ನೂ ಜಾರಿಯಲ್ಲಿದೆ ಎಂದು ಪ್ರಧಾನಿ ಕಚೇರಿಗೆ ಸೂಚಿಸಿದೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಿಮಾಲಯದ ತಪ್ಪಲಿನ ಕೇದಾರ್ ನಾಥ ಹಾಗೂ ಬದರೀನಾಥ ದೇವಾಲಯಗಳಿಗೆ ಭೇಟಿ ನೀಡಲು ಚುನಾವಣಾ ಆಯೋಗ ಅನುಮತಿ ನೀಡಿದೆ. ಮಾದರಿ ನೀತಿ ಸಂಹಿತೆ ಇನ್ನೂ ಜಾರಿಯಲ್ಲಿದೆ ಎಂದು ಪ್ರಧಾನಿ ಕಚೇರಿಗೆ ಸೂಚಿಸಿದೆ
ಉತ್ತರಖಂಡಕ್ಕೆ ಮೋದಿಯ ಎರಡು ದಿನಗಳ ಅಧಿಕೃತ ಭೇಟಿಗೆ ಚುನಾವಣಾ ಆಯೋಗದ ಅಭಿಪ್ರಾಯಗಳನ್ನು ಪ್ರಧಾನಿ ಕಚೇರಿ ಕೇಳಿತ್ತು.
ಮಾರ್ಚ್ 10 ರಂದು ಜಾರಿಗೆ ಬಂದಿರುವ ಮಾದರಿ ನೀತಿ ಸಂಹಿತೆ ಚುನಾವಣಾ ಫಲಿತಾಂಶ ಘೋಷಣೆಯಾಗುವವರೆಗೂ ಜಾರಿಯಲ್ಲಿರುತ್ತದೆ ಎಂದು ಚುನಾವಣಾ ಆಯೋಗ ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ತಿಳಿಸಿದೆ ಎಂಬುದು ತಿಳಿದುಬಂದಿದೆ.
ಮೇ 19 ರಂದು ಏಳನೇ ಹಂತದ ಚುನಾವಣೆ ನಡೆಯಲಿದೆ. ಪ್ರಧಾನಿ ಅಧಿಕೃತ ಭೇಟಿಯಾದ್ದರೆ ಅದನ್ನು ಕೈಗೊಳ್ಳಬಹುದು, ಆದರೆ, ಮಾದರಿ ನೀತಿ ಸಂಹಿತೆ ಇನ್ನೂ ಜಾರಿಯಲ್ಲಿದೆ ಎಂಬುದನ್ನು ಮನದಲ್ಲಿಟ್ಟುಕೊಳ್ಳುವಂತೆ ಸೂಚಿಸಲಾಗಿದೆ.
ಇಂದಿನಿಂದ ಉತ್ತರಖಂಡ್ ರಾಜ್ಯಕ್ಕೆ ಮೋದಿ ಭೇಟಿ ನೀಡಲಿದ್ದಾರೆ. ಇಂದು ಕೇದಾರ್ ನಾಥ್ , ನಾಳೆ ಬದರೀನಾಥ್ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ ಎಂಬುದು ತಿಳಿದುಬಂದಿದೆ.