ದೇಶ

ಲೋಕಾ ಸಮರ; ಅಂತಿಮ ಹಂತದ ಮತದಾನ ಮುಕ್ತಾಯ, ಶೇ.64.26ರಷ್ಟು ಮತದಾನ

Srinivasamurthy VN
ನವದೆಹಲಿ: ಹಾಲಿ ಲೋಕಸಭಾ ಚುನಾವಣೆ 2019ರ ನಿಮಿತ್ತ ಇಂದು ನಡೆದ 7ನೇ ಹಾಗೂ ಅಂತಿಮ ಹಂತದ ಮತದಾನ ಮುಕ್ತಾಯವಾಗಿದ್ದು, ಶೇ.64 .26ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.
ಲೋಕಸಭಾ ಚುನಾವಣೆ 2019ರ 7ನೇ ಮತ್ತು ಅಂತಿಮ ಹಂತದ ಮತದಾನ ಭಾನುವಾರ ಮುಕ್ತಾಯವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಒಟ್ಟು 918 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಿದ್ದಾರೆ.
ಭಾನುವಾರ ನಡೆದ 7ನೇ ಹಾಗೂ ಅಂತಿಮ ಹಂತದ ಮತದಾನದಲ್ಲಿ ಒಟ್ಟು 8 ರಾಜ್ಯಗಳ 59 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಉತ್ತರ ಪ್ರದೇಶ ಮತ್ತು ಪಂಜಾಬ್ ನ ತಲಾ 13 ಕ್ಷೇತ್ರಗಳು, ಪಶ್ಚಿಮ ಬಂಗಾಳದ 9,  ಬಿಹಾರ ಮತ್ತು ಮದ್ಯ ಪ್ರದೇಶದ ತಲಾ  ಕ್ಷೇತ್ರಗಳು, ಹಿಮಾಚಲ ಪ್ರದೇಶದ ನಾಲ್ಕು, ಜಾರ್ಖಂಡ್ ನ ಮೂರು ಮತ್ತ ಕೇಂದ್ರಾಡಳಿತ ಪ್ರದೇಶ ಚಂಡೀಘಡದ ಒಂದು ಕ್ಷೇತ್ರ ಸೇರಿದಂತೆ ಒಟ್ಟು 59 ಕ್ಷೇತ್ರಗಳಿಗೆ ಮತದಾನ ನಡೆದಿತ್ತು, ಈ ಪೈಕಿ ಮತದಾನ ಅಂತ್ಯದ ಹೊತ್ತಿಗೆ ಶೇ.64.26ರಷ್ಟು ಮತದಾನವಾಗಿದೆ ಎಂದು ಚುನವಣಾ ಅಧಿಕಾರಿಗಳು ತಿಳಿಸಿದ್ದಾರೆ.
ಈ ಪೈಕಿ ಬಿಹಾರದಲ್ಲಿ ಶೇ. 53.36ರಷ್ಚು, ಹಿಮಾಚಲ ಪ್ರದೇಶದಲ್ಲಿ ಶೇ. 71.24ರಷ್ಟು, ಮಧ್ಯ ಪ್ರದೇಶದಲ್ಲಿ ಶೇ. 75.53ರಷ್ಟು, ಪಂಜಾಬ್ ನಲ್ಲಿ ಶೇ. 65.77ರಷ್ಟು, ಉತ್ತರ ಪ್ರದೇಶದಲ್ಲಿ58.01ರಷ್ಟು, ಪಶ್ಚಿಮ ಬಂಗಾಳದಲ್ಲಿ ಶೇ. 73.51ರಷ್ಟು, ಜಾರ್ಖಂಡ್ ನಲ್ಲಿ ಶೇ.71.16ರಷ್ಟು ಮತ್ತು ಚಂಡೀಘಡದಲ್ಲಿ ಶೇ.63.57ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.
SCROLL FOR NEXT