ಮೊಹಮ್ಮದ್ ನಾಷೀದ್ 
ದೇಶ

ಮತದಾನೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ, ಮಾಲ್ಡೀವ್ಸ್ ಮಾಜಿ ಅಧ್ಯಕ್ಷರಿಂದ ಮೋದಿಗೆ ಅಭಿನಂದನೆ

ಮತದಾನೋತ್ತರ ಸಮೀಕ್ಷೆಗಳಲ್ಲಿ ಈ ಬಾರಿಯೂ ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಊಹಿಸಲಾಗಿದ್ದು, ಮಾಲ್ಡೀವ್ಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ನಾಷೀದ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ.

ನವದೆಹಲಿ: ವಿವಿಧ ಸಂಸ್ಥೆಗಳು ನಡೆಸಿದ ಮತದಾನೋತ್ತರ ಸಮೀಕ್ಷೆಗಳಲ್ಲಿ ಈ ಬಾರಿಯೂ ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಊಹಿಸಲಾಗಿದ್ದು, ಮಾಲ್ಡೀವ್ಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ನಾಷೀದ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ.

ಬಿಜೆಪಿ ನೇತೃತ್ವದ ಸರ್ಕಾರದೊಂದಿಗೆ ದ್ವೀಪ ರಾಷ್ಟ್ರ ಮಾಲ್ಡೀವ್ಸ್  ಉತ್ತಮ ಸಹಕಾರ ಮುಂದುವರೆಯಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ಭಾರತದ ಚುನಾವಣೆ ಮುಕ್ತಾಯವಾಗಿದ್ದು, ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮಾಲ್ಡೀವ್ಸ್  ಜನರು ಹಾಗೂ ಸರ್ಕಾರ ಬಿಜೆಪಿ ನೇತೃತ್ವದ ಸರ್ಕಾರ ಹಾಗೂ ಪ್ರಧಾನಿ ಮೋದಿ ಅವರೊಂದಿಗೆ ಸಹಕಾರದಿಂದ ಮುಂದುವರೆಯಲಿದ್ದಾರೆ ಎಂಬ ವಿಶ್ವಾಸ ಇರುವುದಾಗಿ ಅವರು ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ.

ಕಳೆದ ವರ್ಷ ಮಾಲ್ಡೀವ್ಸ್ ನಲ್ಲಿ ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಅಬ್ದುಲ್ ಯಾಮಿನ್ ಅವರನ್ನು ಸೋಲಿಸಿ ರಾಷ್ಟ್ರ ಅಧ್ಯಕ್ಷರಾದ ಇಬ್ರಾಹೀಂ ಮೊಹಮ್ಮದ್ ಸೊಲಿಹ್ ಅವರ ಪದಗ್ರಹಣ  ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದರು. ಅಲ್ಲದೇ ಸೊಲಿಹ್  ದೆಹಲಿಗೆ ಕಳೆದ ಡಿಸೆಂಬರ್ ಭೇಟಿ ನೀಡಿದ್ದ ವೇಳೆಯಲ್ಲಿ ಮಾಲೆಗೆ 1.4 ಬಿಲಿಯನ್ ಅಮೆರಿಕನ್ ಡಾಲರ್ ನಷ್ಟು ಆರ್ಥಿಕ ನೆರವನ್ನು ಘೋಷಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದಕ್ಷಿಣ ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ವಲಸೆ ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯ

ಇರಾನ್ ವಿದೇಶಾಂಗ ಸಚಿವ- ಎಸ್ ಜೈಶಂಕರ್ ಮಾತುಕತೆ: ಪ್ರಾದೇಶಿಕ ಸಮರದ ಬಗ್ಗೆ ಆತಂಕ, ಹಡಗುಗಳ ಮೇಲೆ ದಾಳಿ ನಡೆಸದಂತೆ ಒತ್ತಾಯ

ಆಗಸ್ಟ್ 1 ರಂದು ಪ್ರಧಾನ ಮಂತ್ರಿ ಮೋದಿ ಆಂಧ್ರಪ್ರದೇಶ ಮೈಸೂರಿಗೆ ಭೇಟಿ; ಅಭಿವೃದ್ಧಿ ಯೋಜನೆಗಳ ಉದ್ಘಾಟನೆ

ಕಾವೇರಿ ಕಿತ್ತಾಟದ ನಡುವೆ ರಾಜ್ಯಕ್ಕೆ ಹವಾಮಾನ ಇಲಾಖೆ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಸಾಧ್ಯತೆ!

'ಕರ್ನಾಟಕಕ್ಕೆ ನೀರು ನೀಡಲು ನಮ್ಮ ವಿರೋಧವಿಲ್ಲ.. ಆದ್ರೆ ಮೇಕೆದಾಟು ಬೇಡ": ಕಾವೇರಿ ವಿವಾದ ಕುರಿತು AIADMK ಸಂಸದ ಎಂ. ತಂಬಿದುರೈ