ನವದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಮುನ್ನ ಅಂದರೆ ನಾಳೆ ಎನ್ ಡಿಎ ನಾಯಕರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೋಜನ ಕೂಟ ಆಯೋಜಿಸಿದ್ದಾರೆ.
ಲೋಕಸಭಾ ಚುನಾವಣೆ ಫಲಿತಾಂಶ ಘೋಷಣೆಗೆ ಮುಂಚಿತವಾಗಿಯೇ ನಾಳೆ ಅಮಿತ್ ಶಾ ಔತಣಕೂಟ ಆಯೋಜಿಸಿದ್ದು, ಎನ್ ಡಿಎಯ ಪ್ರಮುಖ ನಾಯಕರನ್ನು ಆಹ್ವಾನಿಸಿದ್ದಾರೆ ಎಂಬುದು ತಿಳಿದುಬಂದಿದೆ. ಕೇಂದ್ರ ಸಚಿವರು ಕೂಡಾ ಈ ಔತಣಕೂಟದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಮತ್ತೆ ಸರ್ಕಾರ ರಚಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.
ಇದು ಸಂಪೂರ್ಣ ಚಿತ್ರಣವನ್ನು ನೀಡಿದೆ ಎಂದು ಬಿಜೆಪಿ ಹಾಗೂ ಅದರ ಅಂಗಪಕ್ಷಗಳು ಹೇಳುತ್ತಿದ್ದರೆ, ಪ್ರತಿಪಕ್ಷಗಳು ಸುಳ್ಳು ಎಂದು ಹೇಳುತ್ತಿವೆ. ಒಟ್ಟಾರೇ ಮೇ 23ರಂದು ಫಲಿತಾಂಶ ಬಗ್ಗೆ ಇರುವ ಎಲ್ಲಾ ಊಹಾಪೋಹಗಳಿಗೂ ತೆರೆ ಬೀಳಲಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos