ಮೊಹಮ್ಮದ್ ನಶೀದ್-ನರೇಂದ್ರ ಮೋದಿ
ನವದೆಹಲಿ: ಲೋಕಸಭೆ ಚುನಾವಣೋತ್ತರ ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಗೆ ಬಹುಮತ ಬರುತ್ತದೆ ಎಂದು ಭವಿಷ್ಯ ನುಡಿದಿದ್ದು ಇದರ ಬೆನ್ನಲ್ಲೇ ಮಾಲ್ಡೀವ್ಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ನಶೀದ್ ಅಡ್ವಾನ್ಸ್ ಆಗಿ ಪ್ರಧಾನಿ ಮೋದಿಗೆ ಶುಭಾಶಯ ತಿಳಿಸಿದ್ದಾರೆ.
ಮೊಹಮ್ಮದ್ ನಶೀದ್ ತಮ್ಮ ಟ್ವೀಟ್ ನಲ್ಲಿ ಪ್ರಧಾನಿ ಮೋದಿ ಹಾಗೂ ಬಿಜೆಪಿಗೆ ಶುಭಾಶಯಗಳು. ಮಾಲ್ಡೀವ್ಸ್ ದೇಶ ಭಾರತದ ಜೊತೆಗೆ ಉತ್ತಮ ಬಾಂಧವ್ಯವನ್ನು ಮುಂದುವರೆಸಲು ಇಚ್ಛಿಸುತ್ತದೆ ಎಂದು ಟ್ವೀಟಿಸಿದ್ದಾರೆ.
ಸತತ ಎರಡು ತಿಂಗಳ ಕಾಲ 7 ಹಂತಗಳಲ್ಲಿ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು ಇದರ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳನ್ನು ಸುದ್ದಿ ಮಾಧ್ಯಮಗಳು ಪ್ರಸಾರ ಮಾಡಿದ್ದವು.
ಹೆಚ್ಚಿನ ಸಮೀಕ್ಷೆಗಳಲ್ಲಿ ಪ್ರಧಾನಿ ನೇತೃತ್ವದ ಎನ್ಡಿಎಗೆ ಬಹುಮತ ಬರಲಿದೆ ಎಂದು ಭವಿಷ್ಯ ನುಡಿದಿದ್ದವು. ಈ ಸಮೀಕ್ಷೆಗಳು ಇದೀಗ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ಮೇ 23ರಂದು ಎಲ್ಲಾ ಪಕ್ಷಗಳ ಗೆಲುವು ಸೋಲು ತಿಳಿಯಲಿದೆ.