ರಾಹುಲ್-ಸೋನಿಯಾ-ಪ್ರಣಬ್ ಮುಖರ್ಜಿ 
ದೇಶ

ವಿಪಕ್ಷಗಳಿಗೆ ಮುಖಭಂಗ: ತಮ್ಮ ಮೇಲೆ ನಂಬಿಕೆ ಇಲ್ಲದವರು ಆಯೋಗವನ್ನು ದೂಷಿಸುತ್ತಾರೆ: ಪ್ರಣಬ್ ಮುಖರ್ಜಿ

ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಇವಿಎಂನಲ್ಲಿ ದೋಷವಿದೆ ಎಂದು ಚುನಾವಣಾ ಆಯೋಗವನ್ನು ದೂಷಿಸುತ್ತಿದ್ದರೆ ಇತ್ತ ಕಾಂಗ್ರೆಸ್ ನ ಹಿರಿಯ ನಾಯಕ ಮಾಜಿ ರಾಷ್ಟ್ರಪತಿ...

ನವದೆಹಲಿ: ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಇವಿಎಂನಲ್ಲಿ ದೋಷವಿದೆ ಎಂದು ಚುನಾವಣಾ ಆಯೋಗವನ್ನು ದೂಷಿಸುತ್ತಿದ್ದರೆ ಇತ್ತ ಕಾಂಗ್ರೆಸ್ ನ ಹಿರಿಯ ನಾಯಕ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಚುನಾವಣಾ ಆಯೋಗವನ್ನು ಹೊಗಳುವ ಮೂಲಕ ಕಾಂಗ್ರೆಸ್ಸಿಗೆ ಮುಜುಗರವನ್ನುಂಟು ಮಾಡಿದ್ದಾರೆ.
ಲೋಕಸಭೆ ಚುನಾವಣೆಯನ್ನು ಚುನಾವಣಾ ಆಯೋಗ ಪರಿಪೂರ್ಣವಾಗಿ ನಡೆಸಿದೆ. ನಾವು ಯಾವುದೇ ಸಾಂವಿಧಾನಿಕ ಸಂಸ್ಥೆಯನ್ನು ಬಲಾಢ್ಯಗೊಳಿಸಬೇಕಾದರೆ ಅದರ ಮೇಲೆ ನಂಬಿಕೆ ಇಟ್ಟುಕೊಳ್ಳಬೇಕು ಎಂದು ಪ್ರಣಬ್ ಮುಖರ್ಜಿ ಹೇಳಿದ್ದಾರೆ.
ಭಾರತದಲ್ಲಿ ಚುನಾವಣೆಗಳು ಯಶಸ್ವಿಯಾಗುತ್ತಿದೆ ಎಂದರೆ ಅದಕ್ಕೆ ಕಾರಣ ಚುನಾವಣಾ ಆಯುಕ್ತರು ಸುಕುಮಾರ್ ಸೇನ್ ಅವರಿಂದ ಹಿಡಿದು ಪ್ರಸ್ತುತ ಚುನಾವಣಾ ಆಯುಕ್ತರವರೆಗೂ ಎಲ್ಲರೂ ತಮ್ಮ ಕೆಲಸವನ್ನು ಪರಿಪೂರ್ಣವಾಗಿ ನಿಭಾಯಿಸಿದ್ದಾರೆ. ಅವರನ್ನು ಟೀಕಿಸುವುದು ಸರಿಯಲ್ಲ. ಈ ಚುನಾವಣೆಯೂ ಪರಿಪೂರ್ಣವಾಗಿದೆ ಎಂದರು.
ಇವಿಎಂ ಯಂತ್ರಗಳ ತಿರುಚುವಿಕೆ ಕುರಿತು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಅನುಮಾನ ವ್ಯಕ್ತಪಡಿಸುತ್ತಲೇ ಬಂದಿವೆ. ಇದೇ ಅಲ್ಲದೆ ಇಂದು ಎಲ್ಲಾ ವಿರೋಧ ಪಕ್ಷಗಳು ಸೇರಿ ಚುನಾವಣಾ ಆಯೋಗಕ್ಕೆ ದೂರು ನೀಡಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT