ದೇಶ

ಮೇ.30 ರಂದು ತಿರುಪತಿಯಲ್ಲಿ ಜಗನ್ ಮೋಹನ್ ರೆಡ್ಡಿ ಸಿಎಂ ಆಗಿ ಪ್ರಮಾಣ ವಚನ

Srinivas Rao BV
ಅಮರಾವತಿ:ಆಂಧ್ರಪ್ರದೇಶದಲ್ಲಿ ಆಡಳಿತಾರೂಢ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿಗೆ ಹೀನಾಯ ಸೋಲುಂಟಾಗಿದ್ದು, ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ ಆರ್ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲಿದೆ. 
175 ಸಂಖ್ಯಾಬಲವಿರುವ ಆಂಧ್ರ ವಿಧಾನಸಭೆಯಲ್ಲಿ ವೈಎಸ್ ಆರ್ ಕಾಂಗ್ರೆಸ್ ಪಕ್ಷದ 141 ಅಭ್ಯರ್ಥಿಗಳು ಜಯಗಳಿಸಿದ್ದು, ವೈಎಸ್ ಆರ್ ಕಾಂಗ್ರೆಸ್ ಸ್ಪಷ್ಟಬಹುಮತ ಗಳಿಸಿದ್ದು, ಮೇ.30 ರಂದು ತಿರುಪತಿಯಲ್ಲಿ ಜಗನ್ ಮೋಹನ್ ರೆಡ್ಡಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 
ಇತ್ತ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಇಂದು ಸಂಜೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ.   ಟಿಡಿಪಿ ಪಕ್ಷದ ಮೂಲಗಳ ಪ್ರಕಾರ, ನಾಯ್ಡು ಅವರು ಸಂಜೆ ರಾಜ್ಯಪಾಲ ಇಎಸ್ ಎಲ್ ನರಸಿಂಹನ್ ಅವರಿಗೆ ರಾಜೀನಾಮೆ ಪತ್ರ ರವಾನಿಸಲಿದ್ದಾರೆ. ಫಲಿತಾಂಶದ ಕುರಿತು ಪ್ರತಿಕ್ರಿಯಿಸಲು ನಾಯ್ಡು ಲಭ್ಯವಾಗಿಲ್ಲ.
SCROLL FOR NEXT