ಲಕ್ಷಕ್ಕೂ ಅಧಿಕ ಮತಗಳಿಂದ ಉತ್ತರ ಕನ್ನಡದಲ್ಲಿ ಅನಂತ್ ಕುಮಾರ್ ಹೆಗ್ಡೆ ಮುನ್ನಡೆ
ಉತ್ತರ ಕನ್ನಡ ಜಿಲ್ಲೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಹೆಗ್ಡೆ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಹೆಗ್ಡೆ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
ಮೇ.23 ರಂದು 2019 ರ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಅನಂತ್ ಕುಮಾರ್ ಹೆಗ್ಡೆ 1 ಲಕ್ಷ ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಆನಂದ್ ಆಸ್ನೋಟೀಕರ್ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಸ್ಪರ್ಧಿಸಿದ್ದರು.
ರಾಜ್ಯದಲ್ಲಿ ಬಿಜೆಪಿ 24 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಜೆಡಿಎಸ್ 1, ಕಾಂಗ್ರೆಸ್ 2 ಲೋಕಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.