ದೇಶ

ಅತ್ಯಧಿಕ ಮತಗಳ ಅಂತರದಿಂದ ಗೆದ್ದ ಬಿಜೆಪಿಯ ಅಭ್ಯರ್ಥಿ ಯಾರು?

Nagaraja AB

ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಗುಜರಾತಿನ ನವಸಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ. ಆರ್. ಪಾಟೀಲ್ ತಮ್ಮ ಸಮೀಪದ ಕಾಂಗ್ರೆಸ್ ಅಭ್ಯರ್ಥಿಗಿಂತ 6.89 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಸರ್ವಕಾಲಿಕ  ದಾಖಲೆ ನಿರ್ಮಿಸಿದ್ದಾರೆ.

2014ರ ಲೋಕಸಭಾ ಚುನಾವಣೆಯಲ್ಲಿ ಪ್ರೀತಂ ಮುಂಡೆ ಅವರು ಮಹಾರಾಷ್ಟ್ರದ ಬೀಡ್ ಲೋಕಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ 6. 96 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಪ್ರಧಾನಿ ಮೋದಿ ಈ ಬಾರಿ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ 4.79 ಲಕ್ಷ ಮತಗಳ ಅಂತರದಿಂದ ತಮ್ಮ ಸಮೀಪದ ಎಸ್ಪಿ ಅಭ್ಯರ್ಥಿ ಶಾಲಿನಿ ಯಾದವ್ ಅವರನ್ನು ಸೋಲಿಸಿದ್ದಾರೆ. 2014ರಲ್ಲಿ 3. 71 ಲಕ್ಷ ಮತಗಳ ಅಂತರದಿಂದ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ್ದರು.

ಇನ್ನೂ ಗುಜರಾತಿನ ಗಾಂಧಿನಗರದಿಂದ ಸ್ಪರ್ಧಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ , ತಮ್ಮ ಚೊಚ್ಚಲ ಲೋಕಸಭಾ ಚುನಾವಣೆಯಲ್ಲಿಯೇ 5. 57 ಲಕ್ಷ ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ವಿ. ಕೆ. ಸಿಂಗ್ ಅವರು ಗಾಜಿಯಾಬಾದ್ ಲೋಕಸಭಾ ಕ್ಷೇತ್ರದಲ್ಲಿ 5 ಲಕ್ಷಕ್ಕಿಂತಲೂ ಹೆಚ್ಚು ಮತಗಳ ಅಂತರದಿಂದ ಸಮಾಜವಾದಿ ಪಕ್ಷದ ಸುರೇಶ್ ಬನ್ಸಾಲಿ ಅವರನ್ನು ಪರಾಭವಗೊಳಿಸಿದ್ದಾರೆ. ಬೇಗುಸೆರೈನಲ್ಲಿ ಗಿರಿರಾಜ್ ಸಿಂಗ್ 4. 44 ಲಕ್ಷ ಮತಗಳ ಅಂತರದಿಂದ ಸಿಪಿಐ( ಎಂ) ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಅವರನ್ನು ಸೋಲಿಸಿದ್ದಾರೆ
SCROLL FOR NEXT