ದೇಶ

ಅಮೇಥಿಯನ್ನು ಪ್ರೀತಿಯಿಂದ ನೋಡಿಕೊಳ್ಳಿ; ಸ್ಮೃತಿ ಇರಾನಿಯನ್ನು ಅಭಿನಂದಿಸಿ ರಾಹುಲ್ ಗಾಂಧಿ ಹೇಳಿದ್ದು ಹೀಗೆ!

Sumana Upadhyaya
ನವದೆಹಲಿ: ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ವಿರುದ್ಧ ಸೋಲನ್ನು ಸ್ವೀಕರಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಅಮೇಥಿ ಜನರನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಹೇಳಿ ಧನ್ಯವಾದ ಹೇಳಿದ್ದಾರೆ.
ಸ್ಮೃತಿ ಇರಾನಿಯವರು ಅಮೇಥಿ ಕ್ಷೇತ್ರದ ಜನರನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ ಎಂದು ಭಾವಿಸುತ್ತೇನೆ. ನಾನು ಅಲ್ಲಿನ ಜನರ ತೀರ್ಮಾನವನ್ನು ಸ್ವಾಗತಿಸಿ ಸ್ಮೃತಿ ಇರಾನಿಯವರನ್ನು ಅಭಿನಂದಿಸುತ್ತೇನೆ ಎಂದು ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.
SCROLL FOR NEXT