ನರೇಂದ್ರ ಮೋದಿ 
ದೇಶ

ಎನ್ ಡಿಎ ಸಂಸದೀಯ ನಾಯಕನಾಗಿ ನರೇಂದ್ರ ಮೋದಿ ಆಯ್ಕೆ

ನೂತನ ಸರ್ಕಾರದ ರಚನಾ ಪ್ರಕ್ರಿಯೆ ಮುಂದುವರೆದಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ನೂತನ ಸಂಸದರು...

ನವದೆಹಲಿ: ನೂತನ ಸರ್ಕಾರದ ರಚನಾ ಪ್ರಕ್ರಿಯೆ ಮುಂದುವರೆದಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ನೂತನ ಸಂಸದರು  ತಮ್ಮ ನಾಯಕನಾಗಿ ನರೇಂದ್ರ ಮೋದಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ.

ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಇಂದು ನಡೆದ ಎನ್ ಡಿಎ ಸಂಸದೀಯ ಮಂಡಳಿ ಸಭೆಯಲ್ಲಿ  ನೂತನ ಸಂಸದರು ಕೈ ಎತ್ತುವ ಮೂಲಕ ನರೇಂದ್ರ ಮೋದಿ ಅವರನ್ನು ಸಂಸದೀಯ ನಾಯಕನಾಗಿ ಅನುಮೋದಿಸಿದರು.

ಎನ್ ಡಿಎ ನಾಯಕರಾದ ಎಲ್ . ಅಡ್ವಾಣಿ, ಮುರುಳಿ ಮನೋಹರ್ ಜೋಷಿ ಮತ್ತಿತರ ಎಲ್ಲಾ ನಾಯಕರು ಮೋದಿಗೆ ಅಭಿನಂದನೆ ಸಲ್ಲಿಸಿದರು.

 ನಂತರ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ನರೇಂದ್ರ ಮೋದಿ ಅವರನ್ನು ಸಂಸದೀಯ ನಾಯಕನಾಗಿ ಆಯ್ಕೆ ಮಾಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು. ಅಲ್ಲದೇ, ಮೈತ್ರಿ ಕೂಟದ ಎಲ್ಲಾ ಪಕ್ಷಗಳ ಸಂಸದರನ್ನು ಅಭಿನಂದಿಸಿದರು.
ರಾತ್ರಿ 8 ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಲಿರುವ ನರೇಂದ್ರ ಮೋದಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!