ಧರ್ಮಸ್ಥಳದಲ್ಲಿ ಸುಮಲತಾ ಅಂಬರೀಷ್
ಮಂಗಳೂರು: ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿರುವವರಿಗೆ ಲೋಕಸಭೆ ಚುನಾವಣೆಯಲ್ಲಿ ಜನರೇ ಉತ್ತರ ನೀಡುತ್ತಾರೆ. ಆ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರು ಸೋಮವಾರ ಜಿಡಿಎಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ, ಸುಮಲತಾ ಗೌಡ್ತಿಯೇ ಅಲ್ಲ. ಹುಚ್ಚೇಗೌಡರ ಸೊಸೆ ಸುಮಲತಾ ಎನ್ನುವುದರಲ್ಲಿ ಅರ್ಥವಿಲ್ಲ ಎಂಬ ಜೆಡಿಎಸ್ ಸಂಸದ ಎಲ್ ಆರ್ ಶಿವರಾಮೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿದ ಸುಮಲತಾ, ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇದಕ್ಕೆ ಜನರೇ ಉತ್ತರ ನೀಡುತ್ತಾರೆ ಎಂದರು.
ಇದೇ ವೇಳೆ ಸುಮಲತಾ ಎಂಬ ಹೆಸರಿನಲ್ಲಿ ಬೇರೆ ಬೇರೆ ಅಭ್ಯರ್ಥಿಗಳು ಸ್ಪರ್ಧಿಸುವ ಬಗ್ಗೆ ಮಾತನಾಡಿದ ನಟಿ, ಇದು ಹೊಸ ವಿಚಾರ ಏನಲ್ಲ. ಈ ಹಿಂದೆ ಪುಟ್ಟಣ್ಣಯ್ಯ ಸ್ಪರ್ಧೆ ಸಂದರ್ಭದಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ನಾವು ಜನರಿಗೆ ಅಪರಿಚಿತರಲ್ಲ. ಚಿರಪರಿಚಿತರು. ಜನ ನಮ್ಮನ್ನು ಗುರುತಿಸಿ ಮತ ನೀಡುವ ಮೂಲಕ ನನ್ನನ್ನು ಆಯ್ಕೆ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics