ಕರ್ನಾಟಕ

ಅಸಮಾಧಾನ ಶಮನಕ್ಕೆ ಯತ್ನ: ಬಿಜೆಪಿ ಉಪಾಧ್ಯಕ್ಷೆಯಾಗಿ ತೇಜಸ್ವಿನಿ ಅನಂತ್‍ಕುಮಾರ್ ನೇಮಕ

Srinivas Rao BV
ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಬೇಕಿದ್ದ ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. 
ದಿವಂಗತ ಕೇಂದ್ರ ಸಚಿವ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ಪಕ್ಷದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಟ್ವೀಟ್ ಮಾಡಿದ್ದು ಅಭಿನಂದನೆ ಸಲ್ಲಿಸಿದ್ದಾರೆ. 
ತೇಜಸ್ವಿನಿ ಅನಂತ್ ಕುಮಾರ್ ಅವರು ರಾಜ್ಯ ಬಿಜೆಪಿ ಪಕ್ಷದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಲು ನನಗೆ ಬಹಳ ಸಂತೋಷವಾಗುತ್ತದೆ. ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. 
ತೇಜಸ್ವಿನಿ ಅವರಿಗೆ ಬೆಂಗಳೂರು ದಕ್ಷಿಣದಿಂದ ಟಿಕೆಟ್ ನೀಡುವ ನಿರೀಕ್ಷೆ ಇತ್ತು. ಆದರೆ ಕೊನೆ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿ ಆ ಕ್ಷೇತ್ರದಿಂದ  ಬಿಜೆಪಿಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯಗೆ ಟಿಕೆಟ್ ನೀಡಲಾಗಿತ್ತು. ಈ ಬಗ್ಗೆ ಕಾರ್ಯಕರ್ತರು, ಅನಂತ್ ಕುಮಾರ್, ತೇಜಸ್ವಿನಿ ಅನಂತ್ ಕುಮಾರ್ ಬೆಂಬಲಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಡ್ಯಾಮೇಜ್ ಕಂಟ್ರೋಲ್ ಗೆ ಬಿಜೆಪಿ ಹೈಕಮಾಂಡ್ ಮುಂದಾಗಿದ್ದು, ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಉಪಾಧ್ಯಕ್ಷರ ಹುದ್ದೆಯನ್ನು ನೀಡಿ  ಭಿನ್ನಮತ ಶಮನಕ್ಕೆ ಮುಂದಾಗಿದೆ.
SCROLL FOR NEXT