ಸಂಗ್ರಹ ಚಿತ್ರ 
ಕರ್ನಾಟಕ

ಮಂಡ್ಯ: ಚುನಾವಣೆ ಪ್ರಚಾರಕ್ಕೆ ಮಾಜಿ ಸಂಸದ ಮಾದೇಗೌಡರಿಂದ ಹಣಕ್ಕೆ ಬೇಡಿಕೆ, ಆಡಿಯೋ ಬಹಿರಂಗ

ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ಮುಖಂಡ ಜಿ. ಮಾದೇಗೌಡ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ಅವರಿಗೆ ಕರೆ ಮಾಡಿ ಹಣದ ವ್ಯವಸ್ಥೆ ಮಾಡುವಂತೆ ಕೇಳಿರುವ ಆಡಿಯೋ ಟೇಪ್ ಬಹಿರಂಗವಾಗಿದೆ.

ಮಂಡ್ಯ:  ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪ್ರತಿಷ್ಠೆಯ ಕಣವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ಮುಖಂಡ ಜಿ. ಮಾದೇಗೌಡ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ಅವರಿಗೆ ಕರೆ ಮಾಡಿ ಹಣದ ವ್ಯವಸ್ಥೆ ಮಾಡುವಂತೆ ಕೇಳಿರುವ ಆಡಿಯೋ ಟೇಪ್ ಬಹಿರಂಗವಾಗಿರುವುದು ವರದಿಯಾಗಿದೆ.

ಪ್ರಚಾರಕ್ಕೆ ತೆರಳಲು ಹುಡುಗರು ಹಣ ಕೇಳುತ್ತಾರೆ. ನನ್ನ ಬಳಿ ಹಣ ಇಲ್ಲ. ಹಣಕ್ಕೆ ವ್ಯವಸ್ಥೆ ಮಾಡಿ ಎಂದು ಮಾದೇಗೌಡರೇ ನೇರವಾಗಿಯೇ ಸಚಿವ ಪುಟ್ಟರಾಜು ಅವರನ್ನು ಕೇಳಿದ್ದಾರೆ. ಅಲ್ಲದೆ ಹಣದ ಬೇಡಿಕೆ ಇಟ್ಟಿದ್ದನ್ನು ಟಿವಿ ಮಾಧ್ಯಮಗಳ ಮುಂದೆ ಸಮರ್ಥಿಸಿಕೊಂಡಿದ್ದಾರೆ.

ಈಗ ಹಣ ಇಲ್ಲದೆ ಚುನಾವಣೆಗೆ ಹೋಗುವವರು  ದೇಶದಲ್ಲಿ ಯಾರಿದ್ದಾರೆ ನೀವೆ ತಿಳಿಸಿ ಎಂದು ಮಾದೇಗೌಡರು ಖಾಸಗಿ ಟಿವಿ ಚಾನೆಲ್ ಗೆ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಚುನಾವಣಾ ಆಯೋಗದ ನಿಯಮದ ಪ್ರಕಾರವೇ ಒಬ್ಬ ಅಭ್ಯರ್ಥಿ 70 ಲಕ್ಷ ರೂಪಾಯಿವರೆಗೂ ಅಧಿಕೃತವಾಗಿ ಖರ್ಚು ಮಾಡಲು ಅವಕಾಶವಿದೆ. ಅದರ ಆಧಾರದಲ್ಲೇ ಹಣ ಕೇಳಿರಬಹುದು, ಅದನ್ನು ಕೊಡುವುದರಲ್ಲೂ ತಪ್ಪಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮ ಕಡೆಯಿಂದ ವೈಮಾನಿಕ ದಾಳಿ ಇರುವುದಿಲ್ಲ: 5 ವರ್ಷಗಳಲ್ಲಿ ಮೊದಲ ಬಾರಿಗೆ ಕದನ ವಿರಾಮ ಪ್ರಸ್ತಾಪಿಸಿದ ಯುಕ್ರೇನ್ ಅಧ್ಯಕ್ಷ Zelensky

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!