ಎಚ್,ಡಿ ಕುಮಾರಸ್ವಾಮಿ 
ಕರ್ನಾಟಕ

ಮಹಾಘಟ್ ಬಂಧನ ಅಧಿಕಾರಕ್ಕೆ ಬಂದರೇ ದೇವೇಗೌಡರು ಪ್ರಧಾನಿಯಾಗುವುದಿಲ್ಲ: ಎಚ್ ಡಿಕೆ

ಒಂದು ವೇಳೆ ಮಹಾಘಟ ಬಂಧನ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೇ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಪ್ರಧಾನ ಮಂತ್ರಿ ಅಭ್ಯರ್ಥಿಯಾಗುವುದಿಲ್ಲ ಎಂದು ...

ಮಂಗಳೂರು: ಒಂದು ವೇಳೆ ಮಹಾಘಟ ಬಂಧನ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೇ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ  ಪ್ರಧಾನ ಮಂತ್ರಿ ಅಭ್ಯರ್ಥಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ,.
ಮಂಗಳೂರಿನಲ್ಲಿ ಸುದ್ದಿಗೋಷ್ಚಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಸರ್ಕಾರ ಹಾಗೂ ದೇಶದ ಹಿತದೃಷ್ಟಿಯಿಂದ ಅವರು ಮಹಾಘಟ ಬಂಧನಕ್ಕೆ ಸಲಹೆಗಾರರಾಗಿ ಕೆಲಸ ಮಾಡುತ್ತಾರೆ ಎಂದು ತಿಳಿಸಿದ್ದಾರೆ, 
ಹಾಗಾದರೇ ಮಹಾಘಟ ಬಂಧನದ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಅವರು ಉತ್ತರಿಸಲು ನಿರಾಕರಿಸಿದ ಅವರು, ಪ್ರಧಾನಿ ಅಭ್ಯರ್ಥಿ ಯಾರು ಎಂಬುದು ಮೊದಲ ಆದ್ಯತೆಯಲ್ಲ ಎಂದು ತಿಳಿಸಿದ್ದಾರೆ. 
ಕರ್ನಾಟಕದಲ್ಲಿ 20 ರಿಂದ 22 ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಿದರೇ ದೇಶ ಮತ್ತೊಮ್ಮೆ ಕನ್ನಡಿಗರೊಬ್ಬರನ್ನು ಪ್ರಧಾನಿಯನ್ನಾಗಿ ನೋಡುವ ಅವಕಾಶ ಸಿಗಲಿದೆ ಎಂದು ಫೆಬ್ರವರಿ 27 ರಂದು ಹೇಳಿದ್ದರು,
1996 ರಲ್ಲಿ ನೀವು ಹರಸಿದ್ದರಿಂದ ದೇವೇಗೌಡರು  ಪ್ರಧಾನಿಯಾಗಿದ್ದರು,  ನೀವು ಮತ್ತೊಮ್ಮೆ ಆಶೀರ್ವಾದಿಸಿದರೇ ಕನ್ನಡಿಗರೊಬ್ಬರು ಮತ್ತೆ ಪ್ರಧಾನಿಯಾಗುವ ಸಾಧ್ಯತೆಯಿದೆ ಎಂದು ಮಂಡ್ಯದ ರ್ಯಾಲಿಯಲ್ಲಿ ಕುಮಾರಸ್ವಾಮಿ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ