ಯಶ್ - ನಿಖಿಲ್ ಕುಮಾರಸ್ವಾಮಿ 
ಕರ್ನಾಟಕ

ಮನೆ ಬಾಡಿಗೆ ಕಟ್ಟಕ್ಕಾಗದೇ ಇರೋರು ನಮ್ಮ ಯೋಗ್ಯತೆ ಬಗ್ಗೆ ಮಾತಾಡ್ತಾರೆ: ಯಶ್​ಗೆ ನಿಖಿಲ್ ಟಾಂಗ್

ಮನೆ ಬಾಡಿಗೆ ಕಟ್ಟಕ್ಕಾಗದೇ ಇರೋರು ಈಗ ನಮ್ಮ ಯೋಗ್ಯತೆ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ರಾಕಿಂಗ್ ಸ್ಟಾರ್ ಯಶ್‍ ಅವರಿಗೆ...

ಮಂಡ್ಯ: ಮನೆ ಬಾಡಿಗೆ ಕಟ್ಟಕ್ಕಾಗದೇ ಇರೋರು ಈಗ ನಮ್ಮ ಯೋಗ್ಯತೆ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ರಾಕಿಂಗ್ ಸ್ಟಾರ್ ಯಶ್‍ ಅವರಿಗೆ ನಿಖಿಲ್ ಕುಮಾರಸ್ವಾಮಿ ಸೋಮವಾರ ಟಾಂಗ್ ಕೊಟ್ಟಿದ್ದಾರೆ.
ಇಂದು ನಾಗಮಂಗಲದ ಬೈರಸಂದ್ರದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಯಶ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಿಖಿಲ್ ಕುಮಾರಸ್ವಾಮಿ, ಅವರು ಕುಮಾರಣ್ಣನ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರಂತೆ. ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿಯ ಹಿರಿಮಗನೋ ಕಿರಿ ಮಗನೋ ಗೊತ್ತಿಲ್ಲ. ಬಾಡಿಗೆ ಮನೆಯವರಿಗೆ ಬಾಡಿಗೆ ಕೊಡದೇ ಇದ್ದವರು ಇವತ್ತು ನನ್ನ ಯೋಗ್ಯತೆ ಬಗ್ಗೆ ಮಾತನಾಡ್ತಾರೆ ಎಂದರು.
ನಮ್ಮ ತಾತ ದೇಶದ ಪ್ರಧಾನಿಯಾಗಿದ್ದಾಗ ನಾವು ಬಾಡಿಗೆ ಮನೆಯಲ್ಲಿ ಇದ್ದೇವು. ಪ್ರತಿ ತಿಂಗಳು 5 ಸಾವಿರ ರು. ಬಾಡಿಗೆ ಕಟ್ಟುತ್ತಿದ್ದೇವು. ಆದರೆ ಕತ್ರಿಗುಪ್ಪೆಯಲ್ಲಿ ಬಾಡಿಗೆ ಮನೆಯಲ್ಲಿದ್ದ ಈ ಮಹಾನುಭಾವ(ಯಶ್)ನಿಗೆ ಮನಗೆ ಬಾಡಿಗೆ ಕಟ್ಟಲು ಸಾಧ್ಯವಾಗಿಲ್ಲ. ಆದರೆ ಇವತ್ತು ಬಾಡಿಗೆ ಕೊಡದೇ ಇದ್ದವರು ಇಷ್ಟೆಲ್ಲಾ ಮಾತನಾಡುತ್ತಾರೆ. ನೀವು ನಮ್ಮ ತಂದೆ ತಾಯಾಂದಿರು. ನನ್ನ ತಂದೆ ಹಾಗೂ ತಾತನಿಗೆ ಹೃದಯದಲ್ಲಿ ಸ್ಥಾನ ಕೊಟ್ಟಿದ್ದೀರ. ಹಾಗೆಯೇ ನನಗೂ ಕೊಡುತ್ತೀರ ಅಂತ ಬಂದಿದ್ದೀನಿ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!