ಸಿ ಎಸ್ ಪುಟ್ಟರಾಜು, ಸುಮಲತಾ 
ಕರ್ನಾಟಕ

ಮೈಸೂರಲ್ಲಿ ಹೊಟೇಲ್ ನಿಂದ ಹಣ ಹಂಚುತ್ತಿದ್ದಾರೆ ಎಂಬ ಸಚಿವ ಪುಟ್ಟರಾಜು ಆರೋಪಕ್ಕೆ ಸುಮಲತಾ ಹೇಳಿದ್ದೇನು?

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಎದುರಾಳಿಯಾಗಿ ನಿಂತಿರುವ ಪಕ್ಷೇತರ ...

ಮಂಡ್ಯ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಎದುರಾಳಿಯಾಗಿ ನಿಂತಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಮೈಸೂರಿನಲ್ಲಿ ಹೊಟೇಲ್ ನಲ್ಲಿ ಉಳಿದುಕೊಂಡು ಪ್ರಚಾರಕ್ಕೆ ಬರುವವರಿಗೆ ಮತ್ತು ಪ್ರಚಾರದ ವೇಳೆ ಜನರನ್ನು ಸೇರಿಸಲು ಹಣ ಹಂಚುತಿದ್ದಾರೆ ಎಂಬ ಸಚಿವ ಸಿ ಎಸ್ ಪುಟ್ಟರಾಜು ಹೇಳಿಕೆಗೆ ಸುಮಲತಾ ತಿರುಗೇಟು ನೀಡಿದ್ದಾರೆ.
ನಿನ್ನೆ ಮಂಡ್ಯ ಜಿಲ್ಲೆಯ ದೊಡ್ಡರಸಿನಕೆರೆಯಲ್ಲಿ ಪ್ರಚಾರದ ವೇಳೆ ಪ್ರತಿಕ್ರಿಯಿಸಿದ ಸುಮಲತಾ, ಪುಟ್ಟರಾಜು ಅವರು ನಾನು ಹಣ ಹಂಚುತ್ತಿದ್ದೇನೆ ಎಂದು ಗೊತ್ತಿದ್ದರೆ ಕೇಸ್ ಹಾಕಬಹುದು. ಬೆಲೆ ಇರೋರ ಮಾತಿಗೆ ಮಾತ್ರ ನಾನು ಬೆಲೆ ಕೊಡೋದು. ಇಂಥವರ ಮಾತಿಗೆಲ್ಲ ನಾನು ತಲೆ ಕೆಡಿಸಿಕೊಳ್ಳಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
ಇದೇ ವೇಳೆ ಐಟಿ ಇಲಾಖೆ ಅಧಿಕಾರಿಗಳು ದೂರವಾಣಿ ಕದ್ದಾಲಿಸಿ ಸುಮಲತಾಗೆ ನೀಡಿದ್ದಾರೆ ಅನ್ನುವ ಸಚಿವ ಪುಟ್ಟರಾಜು ಹೇಳಿಕೆಗೆ ಸಹ ತಿರುಗೇಟು ಕೊಟ್ಟ ಸುಮಲತಾ, ಅವರಿಗೆ ತಾವು ತಪ್ಪು ಮಾಡುತ್ತಿದ್ದೇವೆ, ಸರಿದಾರಿಯಲ್ಲಿ ಹೋಗುತ್ತಿಲ್ಲ ಎನ್ನುವ ಅಪರಾಧ ಪ್ರಜ್ಞೆ ಕಾಡುತ್ತಿದೆ. ತಪ್ಪು ಮಾಡದವರು ಭಯಪಡುವುದಿಲ್ಲ. ಐಟಿಯವರಾದ್ರು ಮಾಡಿಕೊಳ್ಳಲಿ, ಸಿಬಿಐನವರಾದ್ರು ಯಾರು ಏನೇ ಮಾಡಿಕೊಳ್ಳಲಿ ಎಂಬ ಭಾವನೆ ತಪ್ಪು ಮಾಡಿಲ್ಲದಿದ್ದರೆ ಇರುತ್ತದೆ. ಇವರಲ್ಲಿ ಹುಳುಕು ಇಟ್ಟುಕೊಂಡು ಹೀಗೆಲ್ಲ ಮಾಡುತ್ತಿರುವುದು ಎಂದು ಆಪಾದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್