ಮಂಡ್ಯ: ಮಂಡ್ಯದಲ್ಲಿ ಲೋಕಸಭಾ ಚುನಾವಣೆ ಕಾವು ದಿನದಿಂದ ದಿನ್ಕಕೆ ಏರುತ್ತಿದ್ದು, ಇದೀಗ ಕಾರ್ಯಕರ್ತರ ನಡುವಿನ ಅಸಹನೆ, ಗಲಭೆಯ ಹಂತ ತಲುಪಿದೆ ಭಾನುವಾರ ರಾತ್ರಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಪ್ರಚಾರದ ವೇಳೆ ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದ್ದು, ಮೂವರು ಕಾರ್ಯಕರ್ತರು ಗಾಯಗೊಂಡಿದ್ದಾರೆ
ಮದ್ದೂರು ತಾಲೂಕಿನ ಗುರುದೇವನಹಳ್ಳಿಯಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಮೂವರು ಜೆಡಿಎಸ್ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ, ನಿಮಗೆ ನ್ಯಾಯ ಕೊಡಿಸುವ ಜವಬ್ದಾರಿ ನಮ್ಮದು. ಯಾವುದೇ ದುಡುಕಿನ ನಿರ್ಧಾರ ಕೈಗೊಳ್ಳಬೇಡಿ ಎಂದು ಗಾಯಾಳುಗಳಲ್ಲಿ ಮನವಿ ಮಾಡಿದರು.
ಈಗ ನಮ್ಮ ಸರ್ಕಾರ ಅಧಿಕಾರದಲ್ಲಿದೆ. ನಾವು ಏನೇ ಮಾಡಿದರೂ ತಪ್ಪಾಗುತ್ತದೆ ಎಂದು ಗಾಯಗೊಂಡವರನ್ನು ಸಮಾಧಾನ ಪಡಿಸಿದ ನಿಖಿಲ್ ಕುಮಾರಸ್ವಾಮಿ, ಚುನಾವಣೆ ಶಾಂತಿಯುತವಾಗಿ ನಡೆಯಬೇಕು ಎಂಬುದು ನಮ್ಮ ಅಪೇಕ್ಷೆ ಎಂದು ತಿಳಿಸಿದರು.
ಈ ಘಟನೆಗೆ ಯಾರು ಜವಾಬ್ದಾರಿ ಎಂದು ಬೇಸರ ವ್ಯಕ್ತಪಡಿಸಿದ ನಿಖಿಲ್ ಕುಮಾರಸ್ವಾಮಿ, ಹಲ್ಲೆ ಎಸಗಿದವರಿಗೆ ಶಿಕ್ಷೆ ಆಗಲೇ ಬೇಕು ಎಂದು ಒತ್ತಾಯಿಸಿದರು. ಘಟನೆಗೆ ಸಂಬಂಧಿಸಿದಂತೆ ಯಾರನ್ನು ಬಂಧಿಸಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics