ಸುಮಲತಾ ಅಂಬರೀಷ್, ನಿಖಿಲ್ ಕುಮಾರಸ್ವಾಮಿ 
ಕರ್ನಾಟಕ

ಯಶ್ ಮನೆ ಬಾಡಿಗೆ ವಿಚಾರ: ನಿಖಿಲ್ ಹೇಳಿಕೆಗೆ ಸುಮಲತಾ ಅಂಬರೀಷ್ ತಿರುಗೇಟು

ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ನಡುವಣ ನೇರ ಹಣಾಹಣಿ ಏರ್ಪಟ್ಟಿದ್ದು, ಪ್ರಚಾರದ ಅಖಾಡದಲ್ಲಿ ವಾಕ್ಸಮರ ತಾರಕ್ಕಕೇರಿದೆ.

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ  ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ನಡುವಣ ನೇರ ಹಣಾಹಣಿ ಏರ್ಪಟ್ಟಿದ್ದು, ಪ್ರಚಾರದ ಅಖಾಡದಲ್ಲಿ ವಾಕ್ಸಮರ ತಾರಕ್ಕಕೇರಿದೆ.

ನಾಗಮಂಗಲದ ಬೆಳ್ಳೂರಿನಲ್ಲಿ ನಿನ್ನೆ ಸುಮಲತಾ ಅಂಬರೀಷ್ ಪರ ಪ್ರಚಾರ ನಡೆಸುತ್ತಿರುವ ನಟ ಯಶ್ ಮನೆ ಬಾಡಿಗೆ ವಿಚಾರ ಪ್ರಸ್ತಾಪಿಸಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿಗೆ ಸುಮಲತಾ ಅಂಬರೀಷ್ ತಿರುಗೇಟು ನೀಡಿದ್ದಾರೆ.

ಯಶ್ ಚಿತ್ರರಂಗದಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ.ನಿಖಿಲ್ ಗೆ ಇನ್ನೂ ಚಿಕ್ಕ ವಯಸ್ಸು , ಅವರು ಮಾಡಿರುವುದು ಕೇವಲ 2 ಚಿತ್ರಗಳಷ್ಟೇ. ಅಂತಹವರು ಚಿತ್ರರಂಗದ ಹಿರಿಯ ನಟರ ಬಗ್ಗೆ ಗೌರವ ನೀಡುವುದನ್ನು ಕಲಿಯಬೇಕು, ಯಶ್ ನಿಖಿಲ್ ಬಗ್ಗೆ ಎಲ್ಲಿಯಾದರೂ ಮಾತನಾಡಿದ್ದಾರಾ?  ಹಾಗಿದ್ದರೂ ಯಶ್ ಬಗ್ಗೆ ಹೇಳಿಕೆ ನಿಖಿಲ್  ಅಹಂಕಾರ ಸೂಚಿಸುತ್ತದೆ ಎಂದಿದ್ದಾರೆ.

ಇನ್ನೂ ಮುಂದಿನ ವಾರ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಕುಟುಂಬದ ಬಗ್ಗೆ ಅಪಪ್ರಚಾರ ನಡೆಸುವ ಹುನ್ನಾರ ನಡೆಸಲಾಗಿದೆ. ಇದಕ್ಕಾಗಿ ತಮ್ಮ ಮನೆಯ ಕೆಲಸಗಾರರಿಗೆ 10 ರಿಂದ 15 ಲಕ್ಷ ಹಣ, ವಿದೇಶ ಪ್ರವಾಸ ಹಾಗೂ ಬೆಂಗಳೂರಿನ ನಿವೇಶನದ ಆಮಿಷ ವೊಡ್ಡಲಾಗಿದೆ. ಮನೆಯಲ್ಲಿ ಕೆಟ್ಟದಾಗಿ ನಡೆಯುತಿತ್ತು ಎಂದು ಬಿಂಬಿಸುವ ಹುನ್ನಾರ ನಡೆಸಲಾಗಿದೆ ಎಂದು ಸುಮಲತಾ ಅಂಬರೀಷ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!