ಕರ್ನಾಟಕ

ಚಿಕ್ಕಬಳ್ಳಾಪುರದಲ್ಲಿ ದೋಸ್ತಿ ಪಕ್ಷಗಳ ಪ್ರಚಾರ: ದೇವೇಗೌಡ, ಸಿದ್ದು ರ್ಯಾಲಿಯಿಂದ ಮೊಯ್ಲಿ ಸ್ಕಿಪ್!

Shilpa D
ಚಿಕ್ಕಬಳ್ಳಾಪುರ: ಮಂಗಳವಾರ ಮಾಜಿ ಪ್ರಧಾನಿ ಎಚ್-ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರದಲ್ಲಿ ತಮ್ಮ ಒಗ್ಗಟ್ಟು ತೋರಿದ್ದಾರೆ, ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಪುನಾರಾಯ್ಕೆ ಬಯಸಿರುವ ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೊಯ್ಲಿ ಪರ ಪ್ರಚಾರ ನಡೆಸಲಾಯಿತು.
ಕೋಮುವಾದಿ ಬಿಜೆಪಿಯನ್ನು  ಸೋಲಿಸಲು  ಜಾತ್ಯಾತೀತ ಶಕ್ತಿಗಳು ಒಂದಾಗಿದ್ದು, ದೇಶದ ಅಭಿವೃದ್ಧಿಯಷ್ಟೇ ನಮಗೆ ಮುಖ್ಯ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.
ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ದೇವೇಗೌಡರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮುಂದಿನ ಪ್ರಧಾನಿ ಆಗಬೇಕೆಂಬುದು ನಮ್ಮ ಬಯಕೆ ಎಂದು ಹೇಳಿದ್ದಾರೆ. 
ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ದೇಶದ 21 ಜಾತ್ಯಾತೀತ  ನಾಯಕರು ಭಾಗವಹಿಸಿದ್ದರು ಆ ಮೂಲಕ ನಮ್ಮ ಶಕ್ತಿ ಪ್ರದರ್ಶಿಸಿದ್ದರು. ಅದಾದ ನಂತರ 13 ಉಪ ಚುನಾವಣೆಗಳು ನಡೆದವು, ಅದರಲ್ಲಿ ಬಿಜೆಪಿ 12ರಲ್ಲಿ ಸೋತಿದೆ, ಒಂದೇ ವೇದಿಕೆಯಲ್ಲಿ ಸಮಾನ ಮನಸ್ಕರು ಒಂದಾಗಿ ಬಿಜೆಪಿ ಸೋಲಿಸಿದ್ದೇ ಇದಕ್ಕೆ ಉತ್ತಮ ಉದಾಹರಣೆ ಎಂದು ದೇವೇಗೌಡ ಹೇಳಿದ್ದಾರೆ. 
ಇನ್ನೂ ಸ್ವಕ್ಷೇತ್ರ ಚಿಕ್ಕಬಳ್ಳಾಪುರದಲ್ಲಿ ನಡೆದ ದೋಸ್ತಿ ಪಕ್ಷಗಳ ಪ್ರಚಾರ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೊಯ್ಲಿ ಗೈರಾಗಿದ್ದರು. 
SCROLL FOR NEXT