ಮಾಯಾವತಿ 
ಕರ್ನಾಟಕ

ಮೈಸೂರು: ಉತ್ತರ ಪ್ರದೇಶದಲ್ಲಿ ಬಿಜೆಪಿ ಸಂಪೂರ್ಣ ನೆಲ ಕಚ್ಚಲಿದೆ- ಮಾಯಾವತಿ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಸಂಪೂರ್ಣ ನೆಲ ಕಚ್ಚಲಿದೆ ಎಂದು ಬಿಎಸ್ಪಿ ವರಿಷ್ಠೆ ಮಾಯಾವತಿ ಹೇಳಿದ್ದಾರೆ.

ಮೈಸೂರು:ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಸಂಪೂರ್ಣ ನೆಲ ಕಚ್ಚಲಿದೆ ಎಂದು ಬಿಎಸ್ಪಿ ವರಿಷ್ಠೆ ಮಾಯಾವತಿ ಹೇಳಿದ್ದಾರೆ.

ಮಹಾರಾಜ ಕಾಲೇಜು ಮೈದಾನದಲ್ಲಿ 'ಆನೆ ನಡಿಗೆ ಸಂಸತ್  ಕಡೆಗೆ' ಎಂಬ ಹೆಸರಿನಲ್ಲಿ ಆಯೋಜಿಸಿದ್ದ  ಬಿಎಸ್ ಪಿ ಸಮಾವೇಶದಲ್ಲಿ ಮಾತನಾಡಿದ ಅವರು, 2014 ರ ಚುನಾವಣೆಯಲ್ಲಿ 80 ಕ್ಷೇತ್ರಗಳಲ್ಲಿ 71 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬಿಜೆಪಿ ಈ ಬಾರಿ  ಬಿಎಸ್ಪಿ- ಎಸ್ಪಿ - ಆರ್ ಎಲ್ ಡಿ ಮೈತ್ರಿಯಿಂದಾಗಿ ಧೂಳಿಪಟವಾಗಲಿದೆ ಎಂದು ಭವಿಷ್ಯ ನುಡಿದರು.

ಭಾಷಣದ ಪೂರ್ಣವಧಿ ಸಮಯವನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಟೀಕಿಸಲು ಮುಡಿಪಾಟ್ಟ ಮಾಯಾವತಿ, ಬಿಜೆಪಿಯ ಚೌಕಿದಾರ್ ಹಾಗೂ ಕಾಂಗ್ರೆಸ್ ನ ನ್ಯಾಯ್ ಕನಿಷ್ಠ ಆದಾಯ ಯೋಜನೆ ಬಗ್ಗೆ ವ್ಯಂಗ್ಯವಾಡಿದರು. ಕಾಂಗ್ರೆಸ್ , ಬಿಜೆಪಿ ಹಲವಾರು ವರ್ಷ ದೇಶ ಆಳಿವೆ. ಆದರೆ, ಬಡತನ ನಿರ್ಮೂಲನೆ ಮಾಡಲು ಈ ಪಕ್ಷಗಳಿಂದ ಸಾಧ್ಯವಾಗಿಲ್ಲ. ಉದ್ಯೋಗದಿಂದ ಮಾತ್ರ ಬಡತನ ನಿರ್ಮೂಲನೆ  ಸಾಧ್ಯ.  ಬಿಎಸ್ ಪಿ ಅಧಿಕಾರಕ್ಕೆ ಬಂದರೆ  ಪ್ರತಿ ಬಡ ಕುಟುಂಬದ ಒಬ್ಬರಿಗೆ ಸರ್ಕಾರಿ ಸಂಸ್ಥೆಗಳಲ್ಲಿ ಉದ್ಯೋಗ ನೀಡುತ್ತೇವೆ ಎಂದರು.

 ಬಿಜೆಪಿ ಇಡಿ, ಸಿಬಿಐ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ.ವಿಪಕ್ಷಗಳ ನಾಯಕರ ಮನೆಗಳ ಮೇಲೆ ದಾಳಿ ನಡೆಸುತ್ತಿದೆ. ಭ್ರಷ್ಟಚಾರ ಪ್ರತಿ ಹಂತದಲ್ಲಿ ತಾಂಡವವಾಡುತ್ತಿದೆ. ಹಿಂದೆ ಕಾಂಗ್ರೆಸ್ ಸರ್ಕಾರ ಬೊಪೋರ್ಸ್  ಹಗರಣದಲ್ಲಿ ಈಗ ಬಿಜೆಪಿ ಸರ್ಕಾರ ರಫೇಲ್ ಹಗರಣದಲ್ಲಿ ಮುಳುಗಿವೆ ಎಂದು ದೂರಿದರು.

 ಕರ್ನಾಟಕದಲ್ಲಿ  ಬಿಎಸ್ಪಿ ಪಕ್ಷದ ಎನ್  ಮಹೇಶ್ ಅವರನ್ನು ಕೊಳ್ಳೇಗಾಲದಿಂದ ಆರಿಸಿ ಶಾಸಕರನ್ನಾಗಿ ಮಾಡಿದ್ದೀರಿ. ಸಚಿವರೂ ಆಗಿದ್ದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಮರ್ಥ್ಯವನ್ನು ಬಿಎಸ್ ಪಿ ಹೊಂದಿದೆ ಎಂದು ಮಾಯಾವತಿ ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT