ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆಗೆ ಇನ್ನು ಕೇವಲ ನಾಲ್ಕು ದಿನ ಬಾಕಿ. ಚುನಾವಣೆಯಲ್ಲಿ ತಮ್ಮ ಪಕ್ಷಗಳ ಅಭ್ಯರ್ಥಿಯನ್ನು ಗೆಲ್ಲಿಸಲು ರಾಜಕೀಯ ಪಕ್ಷಗಳ ನಾಯಕರು ಅಂತಿಮ ಕಸರತ್ತು ನಡೆಸುತ್ತಿದ್ದಾರೆ.
ನಿನ್ನೆ ಕೊಪ್ಪಳದ ಗಂಗಾವತಿಯಲ್ಲಿ ಪ್ರಚಾರ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿಯವರು, ಇಂದು ಮಂಗಳೂರಿಗೆ ಅಪರಾಹ್ನ 3.30ಕ್ಕೆ ಆಗಮಿಸಲಿದ್ದಾರೆ. ನಂತರ ಸಂಜೆ 6 ಗಂಟೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಚುನಾವಣಾ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿಯ ಭದ್ರಕೋಟೆಯಾಗಿರುವ ಮಂಗಳೂರಿನಲ್ಲಿ ಮತ್ತು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.